ADVERTISEMENT

ದೇಶದ ತಯಾರಿಕಾ ವಲಯ ಚುರುಕು

ಪಿಟಿಐ
Published 1 ಸೆಪ್ಟೆಂಬರ್ 2025, 16:08 IST
Last Updated 1 ಸೆಪ್ಟೆಂಬರ್ 2025, 16:08 IST
   

ನವದೆಹಲಿ: ದೇಶದ ತಯಾರಿಕಾ ವಲಯದ ಕಾರ್ಯಾಚರಣೆ ಪರಿಸ್ಥಿತಿಯು ಆಗಸ್ಟ್‌ ತಿಂಗಳಲ್ಲಿ ಕಳೆದ 17 ವರ್ಷಗಳ ಅತ್ಯುತ್ತಮ ಬೆಳವಣಿಗೆಯನ್ನು ಕಂಡಿದೆ. ಉತ್ಪಾದನೆಯ ದಕ್ಷತೆಯು ಹೆಚ್ಚಳ ಕಂಡಿರುವುದು, ಬೇಡಿಕೆಯು ಆರೋಗ್ಯಕರವಾದ ಮಟ್ಟದಲ್ಲಿ ಇರುವುದು ಇದಕ್ಕೆ ಕಾರಣ.

ಎಚ್‌ಎಸ್‌ಬಿಸಿ ಇಂಡಿಯಾ ಮ್ಯಾನ್ಯುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್‌ ಇಂಡೆಕ್ಸ್‌ (ಪಿಎಂಐ) ಸೂಚ್ಯಂಕವು ಜುಲೈನಲ್ಲಿ 59.1ರಷ್ಟು ಇದ್ದಿದ್ದು ಆಗಸ್ಟ್‌ನಲ್ಲಿ 59.3ಕ್ಕೆ ಹೆಚ್ಚಳ ಕಂಡಿದೆ.

ಪಿಎಂಐ ಮಾನದಂಡಗಳ ಪ್ರಕಾರ ಸೂಚ್ಯಂಕವು 50ಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಅದನ್ನು ಬೆಳವಣಿಗೆ ಎಂದು ಪರಿಗಣಿಸಲಾಗುತ್ತದೆ. 50ಕ್ಕಿಂತ ಕಡಿಮೆ ಇದ್ದರೆ ಅದನ್ನು ಕುಸಿತವೆಂದು ಕಾಣಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.