ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನಾ ಬೆಳವಣಿಗೆಯು ಜನವರಿ ತಿಂಗಳಲ್ಲಿ ಶೇ 5ರಷ್ಟು ಆಗಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ತಿಳಿಸಿದೆ.
ಹಿಂದಿನ ವರ್ಷದ ಇದೇ ಅವಧಿಯಲ್ಲಿ ಉತ್ಪಾದನೆಯು ಶೇ 4.2ರಷ್ಟು ದಾಖಲಾಗಿತ್ತು. ತಯಾರಿಕಾ ವಲಯದ ಚಟುವಟಿಕೆಯು ಏರಿಕೆಯಾಗಿರುವುದರಿಂದ ಒಟ್ಟಾರೆ ಕೈಗಾರಿಕಾ ಉತ್ಪಾದನೆ ಚಟುವಟಿಕೆಯು ಸದೃಢಗೊಂಡಿದೆ ಎಂದು ತಿಳಿಸಿದೆ.
ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಬೆಳವಣಿಗೆಯನ್ನು ಲೆಕ್ಕ ಹಾಕಲಾಗುತ್ತದೆ.
ಕಳೆದ ವರ್ಷದ ಜನವರಿಯಲ್ಲಿ ಗಣಿಗಾರಿಕೆ ಮತ್ತು ವಿದ್ಯುತ್ ವಲಯದ ಉತ್ಪಾದನೆಯು ಕ್ರಮವಾಗಿ ಶೇ 6 ಮತ್ತು ಶೇ 5.6ರಷ್ಟಿತ್ತು. ಪ್ರಸಕ್ತ ವರ್ಷದ ಜನವರಿಯಲ್ಲಿ ಶೇ 4.4 ಮತ್ತು ಶೇ 2.4ಕ್ಕೆ ಇಳಿದಿದೆ. ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌ನಿಂದ ಜನವರಿವರೆಗೆ ಐಐಪಿ ಬೆಳವಣಿಗೆಯು ಶೇ 4.2ರಷ್ಟಾಗಿದೆ. ಹಿಂದಿನ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಶೇ 6ರಷ್ಟಿತ್ತು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.