ADVERTISEMENT

ಸಕಾರಾತ್ಮಕ ವಹಿವಾಟಿನ ವಾರ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2020, 17:54 IST
Last Updated 18 ಏಪ್ರಿಲ್ 2020, 17:54 IST
   

ಮುಂಬೈ: ದೇಶದ ಷೇರುಪೇಟೆಗಳ ವಾರದ ವಹಿವಾಟು ಸಕಾರಾತ್ಮಕವಾಗಿ ಅಂತ್ಯವಾಗಿದ್ದು ಹೂಡಿಕೆದಾರರ ಸಂಪತ್ತು ಮೌಲ್ಯ ₹ 2.69 ಲಕ್ಷ ಕೋಟಿ ಹೆಚ್ಚಾಗಿದೆ.

ಮುಂಬೈ ಷೇರುಪೇಟೆಯ ಬಂಡವಾಳ ಮೌಲ್ಯ ₹ 120.81 ಲಕ್ಷ ಕೋಟಿಗಳಿಂದ ₹ 123.50 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 429 ಅಂಶಗಳ ಗಳಿಕೆಯೊಂದಿಗೆ 31,588 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಗೊಂಡಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 155 ಅಂಶ ಹೆಚ್ಚಾಗಿ 9,266 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಆರ್‌ಬಿಐ ಶುಕ್ರವಾರ ಆರ್ಥಿಕ ಉತ್ತೇಜನಾ ಕ್ರಮಗಳನ್ನು ಘೋಷಿಸಿದೆ. ಇದರಿಂದಾಗಿ ದಿನದ ವಹಿವಾಟಿನಲ್ಲಿ ಸಂವೇದಿ ಸೂಚ್ಯಂಕ 986 ಅಂಶಗಳ ಜಿಗಿತ ಕಂಡು ಒಟ್ಟಾರೆ ವಾರದ ವಹಿವಾಟನ್ನು ಸಕಾರಾತ್ಮಕವಾಗಿ ಅಂತ್ಯಕಾಣುವಂತೆ ಮಾಡಿತು.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ವಾರದ ವಹಿವಾಟಿನಲ್ಲಿ 12 ಪೈಸೆ ಇಳಿಕೆಯಾಗಿದೆ. ಶುಕ್ರವಾರದ ವಹಿವಾಟಿನ ಅಂತ್ಯಕ್ಕೆ ₹76.39ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.