ಮುಂಬೈ: ದೇಶದ ಷೇರು ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಚೇತರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 182 ಅಂಶ ಏರಿಕೆಯಾಗಿ, 81,330 ಅಂಶಗಳಲ್ಲಿ ವಹಿವಾಟು ಕೊನೆಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 88 ಅಂಶ ಹೆಚ್ಚಳವಾಗಿ, 24,666ರಲ್ಲಿ ಸ್ಥಿರಗೊಂಡಿತು.
ಟಾಟಾ ಸ್ಟೀಲ್, ಎಟರ್ನಲ್, ಟೆಕ್ ಮಹೀಂದ್ರ, ಮಾರುತಿ ಸುಜುಕಿ, ಮಹೀಂದ್ರ ಆ್ಯಂಡ್ ಮಹೀಂದ್ರ, ಇನ್ಫೊಸಿಸ್, ಇಂಡಸ್‌ಇಂಡ್ ಬ್ಯಾಂಕ್, ಎಚ್‌ಸಿಎಲ್ ಟೆಕ್, ಟಿಸಿಎಸ್, ಭಾರ್ತಿ ಏರ್‌ಟೆಲ್‌ನ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಏಷ್ಯನ್ ಪೇಂಟ್ಸ್, ಟಾಟಾ ಮೋಟರ್ಸ್, ಕೋಟಕ್ ಮಹೀಂದ್ರ ಬ್ಯಾಂಕ್, ಎನ್‌ಟಿಪಿಸಿ ಮತ್ತು ಪವರ್ ಗ್ರಿಡ್ ಷೇರಿನ ಮೌಲ್ಯದಲ್ಲಿ ಇಳಿದಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.13ರಷ್ಟು ಕಡಿಮೆಯಾಗಿದೆ. ಪ್ರತಿ ಬ್ಯಾರೆಲ್ 65.88 ಡಾಲರ್ ಆಗಿದೆ. ಮಂಗಳವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹476 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ಚಿಲ್ಲರೆ ಹಣದುಬ್ಬರ ಆರು ವರ್ಷದ ಕನಿಷ್ಠ ಮಟ್ಟಕ್ಕೆ ದಾಖಲಾಗಿದೆ. ಸಗಟು ಹಣದುಬ್ಬರ 13 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ. ಅಮೆರಿಕ ಮತ್ತು ಚೀನಾ ಸುಂಕ ಸಮರಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಇದು ದೇಶೀಯ ಷೇರುಪೇಟೆಯಲ್ಲಿ ಸಕಾರಾತ್ಮಕ ವಹಿವಾಟಿಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.