ADVERTISEMENT

ಷೇರುಪೇಟೆ ಸೂಚ್ಯಂಕ: ಸೆನ್ಸೆಕ್ಸ್‌ 636 ಅಂಶ ಇಳಿಕೆ

ಪಿಟಿಐ
Published 3 ಜೂನ್ 2025, 13:40 IST
Last Updated 3 ಜೂನ್ 2025, 13:40 IST
   

ಮುಂಬೈ: ವಿದೇಶಿ ಬಂಡವಾಳದ ಹೊರಹರಿವು ಮತ್ತು ಹೆಚ್ಚುತ್ತಿರುವ ಜಾಗತಿಕ ಅನಿಶ್ಚಿತತೆಯಿಂದ ದೇಶದ ಷೇರು ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.

ಹೂಡಿಕೆದಾರರು ಇಂಧನ, ಹಣಕಾಸು ಮತ್ತು ಐ.ಟಿ ವಲಯದ ಷೇರುಗಳ ಮಾರಾಟಕ್ಕೆ ಮುಂದಾದರು. ಹೀಗಾಗಿ ಸೂಚ್ಯಂಕಗಳು ಇಳಿಕೆ ಕಂಡವು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 636 ಅಂಶ ಇಳಿಕೆಯಾಗಿ, 80,737 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ವಹಿವಾಟಿನ ನಡುವೆ 798 ಅಂಶ ಕುಸಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 174 ಅಂಶ ಇಳಿಕೆಯಾಗಿ, 24,542 ಅಂಶಗಳಿಗೆ ಕೊನೆಗೊಂಡಿತು.

ADVERTISEMENT

ಅದಾನಿ ಪೋರ್ಟ್ಸ್‌, ಬಜಾಜ್‌ ಫಿನ್‌ಸರ್ವ್‌, ಬಜಾಜ್‌ ಫೈನಾನ್ಸ್‌, ಪವರ್‌ ಗ್ರಿಡ್‌, ಎಟರ್ನಲ್‌, ಇಂಡಸ್‌ಇಂಡ್‌ ಬ್ಯಾಂಕ್‌, ಮಾರುತಿ ಸುಜುಕಿ, ಟಿಸಿಎಸ್‌ ಮತ್ತು ಅಲ್ಟ್ರಾಟೆಕ್‌ ಸಿಮೆಂಟ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಮಹೀಂದ್ರ ಆ್ಯಂಡ್‌ ಮಹೀಂದ್ರ ಷೇರಿನ ಮೌಲ್ಯದಲ್ಲಿ ಏರಿಕೆ ಆಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಸೋಮವಾರದ ವಹಿವಾಟಿನಲ್ಲಿ ₹2,589 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಏಷ್ಯಾದ ಮಾರುಕಟ್ಟೆಗಳ ಪೈಕಿ ಶಾಂಘೈ ಮತ್ತು ಹಾಂಗ್‌ಕಾಂಗ್‌ ಸಕಾರಾತ್ಮಕವಾಗಿ ಅಂತ್ಯಗೊಂಡಿವೆ. ಜಪಾನ್‌ ಮಾರುಕಟ್ಟೆಯು ಇಳಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರವು ಶೇ 0.28ರಷ್ಟು ಏರಿಕೆಯಾಗಿದೆ. ಪ್ರತಿ ಬ್ಯಾರೆಲ್‌ 64.81 ಡಾಲರ್ (₹5,550) ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.