ADVERTISEMENT

ಮುಂಬೈ ಷೇರುಪೇಟೆ: 6ನೇ ದಿನವೂ ನಕಾರಾತ್ಮಕ ಚಲನೆ

ಪಿಟಿಐ
Published 13 ಮೇ 2022, 14:00 IST
Last Updated 13 ಮೇ 2022, 14:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಹಣದುಬ್ಬರ ಏರಿಕೆ ಮತ್ತು ವಿದೇಶಿ ಬಂಡವಾಳ ಹೊರಹರಿವಿನ ಕಾರಣಗಳಿಂದಾಗಿ ದೇಶದ ಷೇರುಪೇಟೆಗಳಲ್ಲಿ ಶುಕ್ರವಾರವೂ ವಹಿವಾಟು ಇಳಿಕೆ ಕಾಣುವಂತಾಯಿತು. ಈ ಮೂಲಕ ಸತತ ಆರನೇ ವಹಿವಾಟು ಅವಧಿಯಲ್ಲಿಯೂ ನಕಾರಾತ್ಮಕ ಚಲನೆ ಮುಂದುವರಿಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 136 ಅಂಶ ಇಳಿಕೆ ಕಂಡು 52,794 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 26 ಅಂಶ ಇಳಿಕೆ ಆಗಿ 15,782 ಅಂಶಗಳಿಗೆ ತಲುಪಿತು.

ವಿದೇಶಿ ಬಂಡವಾಳ ಹೊರಹರಿವು ಮುಂದುವರಿದಿರುವುದು ವಹಿವಾಟಿನ ಮೇಲೆ ಪರಿಣಾಮ ಬೀರಿತು. ಏಪ್ರಿಲ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 7.79ಕ್ಕೆ ಏರಿಕೆ ಕಂಡಿರುವುದರಿಂದ ಆರ್‌ಬಿಐಗೆ ಬಡ್ಡಿದರ ಏರಿಕೆ ಮಾಡದ ಹೊರತು ಬೇರೆ ಆಯ್ಕೆ ಉಳಿದಿಲ್ಲ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯಕುಮಾರ್‌ ಹೇಳಿದ್ದಾರೆ.

ADVERTISEMENT

ಬ್ರೆಂಟ್ ಕಚ್ಚಾ ತೈಲ ದರ ಶೇ 1.09ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 108.6 ಡಾಲರ್‌ಗಳಿಗೆ ಏರಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.