ADVERTISEMENT

ಷೇರುಪೇಟೆ: ನಕಾರಾತ್ಮಕ ಅಂತ್ಯ ಕಂಡ ವಹಿವಾಟು

ಪಿಟಿಐ
Published 10 ಅಕ್ಟೋಬರ್ 2022, 12:56 IST
Last Updated 10 ಅಕ್ಟೋಬರ್ 2022, 12:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳು ಸತತ ಎರಡನೇ ದಿನವೂ ನಕಾರಾತ್ಮಕವಾಗಿ ವಹಿವಾಟು ಅಂತ್ಯಗೊಳಿಸಿದವು. ಉಕ್ರೇನ್‌ ಬಿಕ್ಕಟ್ಟು ತೀವ್ರಗೊಂಡಿರುವ ಜೊತೆಗೆ, ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಬಡ್ಡಿದರವನ್ನುಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇರುವುದು ಜಾಗತಿಕ ಷೇರುಪೇಟೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ಇದರಿಂದಾಗಿ ದೇಶದ ಷೇರುಪೇಟೆಗಳೂ ಇಳಿಕೆ ಕಾಣುವಂತಾಯಿತು.

ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಇಳಿಕೆ ಕಂಡಿರುವುದು ಹಾಗೂ ವಿದೇಶಿ ಬಂಡವಾಳದ ಹೊರಹರಿವು ಸಹ ವಹಿವಾಟಿನ ಮೇಲೆ ಪರಿಣಾಮ ಬೀರಿವೆ ಎಂದು ವರ್ತಕರು ಹೇಳಿದ್ದಾರೆ.

ಮಧ್ಯಂತರ ವಹಿವಾಟಿನಲ್ಲಿ ಸೆನ್ಸೆಕ್ಸ್ 800 ಅಂಶಗಳಷ್ಟು ಕುಸಿದಿತ್ತು. ವಹಿವಾಟಿನ ಅಂತ್ಯದ ವೇಳೆಗೆ ಕುಸಿತವು 200 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 74 ಅಂಶ ಇಳಿಕೆ ಕಂಡಿತು. ಐ.ಟಿ. ಮತ್ತು ತಂತಂತ್ರಜ್ಞಾನ ವಲಯದ ಷೇರುಗಳು ಮಾತ್ರವೇ ಗಳಿಕೆ ಕಂಡವು.

ADVERTISEMENT

ಏಷ್ಯಾದಲ್ಲಿ, ಶಾಂಘೈ ಮತ್ತು ಹಾಂಗ್‌ಕಾಂಗ್ ಷೇರುಪೇಟೆಗಳು ಇಳಿಕೆ ಕಂಡವು. ಅಮೆರಿಕದ ಷೇರುಪೇಟೆ ಹೆಚ್ಚಿನ ನಷ್ಟ ಕಂಡಿತು. ಯುರೋಪ್‌ ಮಾರುಕಟ್ಟೆಗಳ ವಹಿವಾಟು ಸಹ ಇಳಿಮುಖವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.