
ನವದೆಹಲಿ: ‘ಸರಕುಗಳ ಬೆಲೆ ಹೆಚ್ಚಳವಾಗುತ್ತಿದೆ. ಹೀಗಾಗಿ ಕಾರುಗಳ ದರ ಏರಿಕೆ ಮಾಡುವುದನ್ನು ಪರಿಗಣಿಸಲಾಗುವುದು’ ಎಂದು ಮಾರುತಿ ಸುಜುಕಿ ಇಂಡಿಯಾದ ಮಾರ್ಕೆಟಿಂಗ್ ಮತ್ತು ಮಾರುಕಟ್ಟೆ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಪಾರ್ಥೊ ಬ್ಯಾನರ್ಜಿ ಹೇಳಿದ್ದಾರೆ.
ಆದರೆ, ವಾಹನಗಳ ಬೆಲೆಯನ್ನು ಯಾವಾಗ ಹೆಚ್ಚಳ ಮಾಡಲಾಗುತ್ತದೆ ಎಂಬುದನ್ನು ಅವರು ತಿಳಿಸಿಲ್ಲ.
ಸರಕುಗಳ ಬೆಲೆ ಏರಿಕೆಯಿಂದಾಗಿ ತಯಾರಿಕಾ ವೆಚ್ಚವು ಹೆಚ್ಚಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ವಾಹನಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ ಹೇಳಿದ್ದಾರೆ.
ಕಂಪನಿಯು ಪ್ರಸ್ತುತ 1.75 ಲಕ್ಷ ವಾಹನಗಳನ್ನು ಗ್ರಾಹಕರಿಗೆ ಹಸ್ತಾಂತರ ಮಾಡುವುದನ್ನು ಬಾಕಿ ಉಳಿಸಿಕೊಂಡಿದೆ. ಜನವರಿಯಲ್ಲಿ 2.78 ಲಕ್ಷ ವಾಹನಗಳಿಗೆ ಬುಕಿಂಗ್ ಸ್ವೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಂಪನಿಯ ಬೆಲೆ ಸಂರಕ್ಷಣಾ ಯೋಜನೆಯ ಅಡಿಯಲ್ಲಿ ವಾಹನವನ್ನು ಬುಕಿಂಗ್ ಮಾಡಿಕೊಂಡವರಿಗೆ ದರ ಏರಿಕೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.