ADVERTISEMENT

ಮಾರುತಿ: 5 ಸಾವಿರ ಕಾರು ಮಾರಾಟ

ಪಿಟಿಐ
Published 18 ಮೇ 2020, 21:25 IST
Last Updated 18 ಮೇ 2020, 21:25 IST

ನವದೆಹಲಿ:ದೇಶದಾದ್ಯಂತ ಇರುವ 1,350ಕ್ಕೂ ಅಧಿಕ ಮಳಿಗೆಗಳಲ್ಲಿ ಇತ್ತೀಚಿನ ಕೆಲವೇ ದಿನಗಳಲ್ಲಿ 5 ಸಾವಿರ ಕಾರ್‌ಗಳನ್ನು ಮಾರಾಟ ಮಾಡಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

ಕಾರು ಖರೀದಿ ಪ್ರಕ್ರಿಯೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನ್ನುವುದನ್ನು ಖಾತರಿಪಡಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಮಾರ್ಗದರ್ಶನಗಳ ಆಧಾರದ ಮೇಲೆ ಸುರಕ್ಷತೆಗೆ ಗಮನ ನೀಡಲಾಗಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಕೆನೆಚಿ ಅಯಕುವಾ ತಿಳಿಸಿದ್ದಾರೆ.

ಕಿಯಾ ಕಾರ್ಯಾಚರಣೆ: ಕಿಯಾ ಮೋಟರ್ಸ್ ಕಂಪನಿಯು ಅನಂತಪುರದಲ್ಲಿನ ಘಟಕದಲ್ಲಿ ಕಾರ್ಯಾಚರಣೆ ಆರಂಭಿಸಿರುವುದಾಗಿ ತಿಳಿಸಿದೆ.

ADVERTISEMENT

ಸಿಬ್ಬಂದಿಯ ಸುರಕ್ಷತೆಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನೂ ತೆಗೆದುಕೊಳ್ಳಲಾಗಿದೆ. ಸದ್ಯಕ್ಕೆ ಒಂದು ಪಾಳಿಯಲ್ಲಿ ಕೆಲಸ ನಡೆಯುತ್ತಿದೆ. ಕೋವಿಡ್‌–19 ಪರಿಸ್ಥಿತಿಯಿಂದ ದೇಶವು ಸಂಪೂರ್ಣವಾಗಿ ಹೊರಬಂದ ಬಳಿಕ ಪೂರ್ಣ ಪ್ರಮಾಣದಲ್ಲಿ ಸಿಬ್ಬಂದಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.