ಬೆಂಗಳೂರು: ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ತನ್ನ ಹೊಸ ಇ ವಿಟಾರಾವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಈ ವಾಹನವು 7 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ಇದರಲ್ಲಿ ಕಾರು ಚಾಲನೆಯ ಆಧುನಿಕ ತಂತ್ರಜ್ಞಾನ ವ್ಯವಸ್ಥೆಯ (ಎಡಿಎಎಸ್) 2ನೇ ಹಂತವನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಹೋಂ ಚಾರ್ಜರ್, ಫಾಸ್ಟ್ ಡಿಸಿ ಚಾರ್ಜರ್ ವ್ಯವಸ್ಥೆ ಇದೆ. ಜೊತೆಗೆ 60 ವೈಶಿಷ್ಟ್ಯಗಳನ್ನು ಒಳಗೊಂಡಿದೆ ಎಂದು ಕಂಪನಿ ತಿಳಿಸಿದೆ.
‘ಮೇಕ್ ಇನ್ ಇಂಡಿಯಾಕ್ಕೆ ಕಂಪನಿ ಬದ್ಧವಾಗಿದೆ. ಭಾರತದಲ್ಲೇ ವಾಹನಗಳನ್ನು ತಯಾರಿಸಿ, 100ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುವುದು’ ಎಂದು ಕಂಪನಿಯ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯ ನಿರ್ವಾಹಕ ಅಧಿಕಾರಿ ಪಾರ್ಥೋ ಬ್ಯಾನರ್ಜಿ ತಿಳಿಸಿದ್ದಾರೆ.
ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಯಾಣದ ವೇಳೆ ವಾಹನವು ಉತ್ತಮ ಅನುಭವ ನೀಡಲಿದೆ ಎಂದು ಕಂಪನಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.