ADVERTISEMENT

ಮಾರ್ಚ್‌ ಒಳಗೆ 3,700 ಮಾರಾಟ ಮಳಿಗೆ: ಮಾರುತಿ

ಪಿಟಿಐ
Published 18 ನವೆಂಬರ್ 2022, 20:01 IST
Last Updated 18 ನವೆಂಬರ್ 2022, 20:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ : ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ವೇಳೆಗೆ ಒಟ್ಟು 3,700 ಮಾರಾಟ ಮಳಿಗೆಗಳನ್ನು ಹೊಂದುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ ಎಂದು ಕಂಪನಿಯ ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ ಶಶಾಂಕ್‌ ಶ್ರೀವಾಸ್ತವ ತಿಳಿಸಿದ್ದಾರೆ.

ಬೇಡಿಕೆ ಹೆಚ್ಚುತ್ತಿರುವುದರಿಂದ ಮಾನೇಸರದಲ್ಲಿ ಇರುವ ಘಟಕದ ತಯಾರಿಕಾ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿದೆ. ಹೀಗಾಗಿ ಕಂಪನಿಯು ಈ ನಿರೀಕ್ಷೆ ಇಟ್ಟುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಕಂಪನಿಯು ಹೈದರಾಬಾದ್‌ನಲ್ಲಿ 3,500ನೇ ಮಳಿಗೆಯನ್ನು ಆರಂಭಿಸಿದೆ. ಕಂಪನಿಯು ದೇಶದಾದ್ಯಂತ ಸದ್ಯ 2,250 ನಗರಗಳು ಮತ್ತು ಪಟ್ಟಣಗಳಲ್ಲಿ ವಹಿವಾಟು ನಡೆಸುತ್ತಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.