ADVERTISEMENT

ಮಾರುತಿ ಲಾಭ ಶೇ 80ರಷ್ಟು ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2023, 12:26 IST
Last Updated 27 ಅಕ್ಟೋಬರ್ 2023, 12:26 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ (ಪಿಟಿಐ): ಮಾರುತಿ ಸುಜುಕಿ ಇಂಡಿಯಾದ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 80ರಷ್ಟು ಹೆಚ್ಚಾಗಿ ₹3,716 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭವು ₹2,061 ಕೋಟಿಯಷ್ಟು ಇತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಮಾರಾಟದಿಂದ ಬಂದಿರುವ ವರಮಾನವು ₹28,543 ಕೋಟಿಯಿಂದ ₹35,535 ಕೋಟಿಗೆ ಏರಿಕೆ ಕಂಡಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು 5.52 ಲಕ್ಷ ವಾಹನಗಳನ್ನು ಮಾರಾಟ ಮಾಡಿದ್ದು, ಅದರಲ್ಲಿ ದೇಶದಲ್ಲಿ ಮಾರಾಟ ಮಾಡಿರುವ ವಾಹನಗಳ ಸಂಖ್ಯೆ 4.82 ಲಕ್ಷದಷ್ಟು ಇದೆ. 69,324 ಕಾರುಗಳನ್ನು ರಫ್ತು ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.