ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು (ಎಂಎಸ್‌ಐ) 2024–25ನೇ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ₹3,911 ಕೋಟಿ ನಿವ್ವಳ ಲಾಭ ಗಳಿಸಿದೆ.
2023–24ನೇ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,952 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದ ಪ್ರಮಾಣದಲ್ಲಿ ಶೇ 1ರಷ್ಟು ಇಳಿಕೆಯಾಗಿದೆ. ವೆಚ್ಚದ ಏರಿಕೆಯಿಂದಾಗಿ ಲಾಭದ ಪ್ರಮಾಣ ಕಡಿಮೆಯಾಗಿದೆ ಎಂದು ಕಂಪನಿ, ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.
ಮಾರ್ಚ್ ತ್ರೈಮಾಸಿಕದಲ್ಲಿ ಒಟ್ಟು ವರಮಾನ ₹38,471 ಕೋಟಿಯಾಗಿದೆ. ಒಟ್ಟು ವೆಚ್ಚದಲ್ಲಿ ಶೇ 8.5ರಷ್ಟು ಹೆಚ್ಚಳವಾಗಿದೆ. ದೇಶೀಯವಾಗಿ 5,19,546 ವಾಹನಗಳು ಮಾರಾಟವಾಗಿದ್ದರೆ, 85,089 ವಾಹನಗಳನ್ನು ರಫ್ತು ಮಾಡಲಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.