ADVERTISEMENT

ಮಾರುತಿ, ಮಹೀಂದ್ರ ವಾಹನ ಬೆಲೆ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2024, 15:43 IST
Last Updated 6 ಡಿಸೆಂಬರ್ 2024, 15:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಕಾರುಗಳ ಬೆಲೆಯನ್ನು ಶೇ 4ರಷ್ಟು ಏರಿಕೆ ಮಾಡಲು ನಿರ್ಧರಿಸಿದೆ. 

ಹೊಸ ದರವು ಜನವರಿ 1ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ತಿಳಿಸಿದೆ.

ತಯಾರಿಕೆ ಮತ್ತು ಕಾರ್ಯಾಚರಣೆ ವೆಚ್ಚದಲ್ಲಿನ ಹೆಚ್ಚಳದಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ. ಇದು ಗ್ರಾಹಕರ ಮೇಲೆ ಕನಿಷ್ಠ ಪರಿಣಾಮ ಬೀರಲಿದೆ ಎಂದು ತಿಳಿಸಿದೆ.

ADVERTISEMENT

ಮಹೀಂದ್ರ ಬೆಲೆ ಹೆಚ್ಚಳ: ಮಹೀಂದ್ರ ಆ್ಯಂಡ್‌ ಮಹೀಂದ್ರ ಕಂಪನಿಯು ಎಸ್‌ಯುವಿ ಮತ್ತು ವಾಣಿಜ್ಯ ವಾಹನಗಳ ಬೆಲೆಯನ್ನು ಜನವರಿಯಿಂದ ಜಾರಿಗೆ ಬರುವಂತೆ ಶೇ 3ರಷ್ಟು ಏರಿಕೆ ಮಾಡುವುದಾಗಿ ತಿಳಿಸಿದೆ.

ಜೆಎಸ್‌ಡಬ್ಲ್ಯು ಎಂಜಿ ಮೋಟರ್ ಇಂಡಿಯಾ ಸಹ ಎಲ್ಲ ಮಾದರಿಯ ವಾಹನಗಳ ಬೆಲೆಯನ್ನು ಶೇ 3ರಷ್ಟು ಏರಿಕೆ ಮಾಡಲಾಗುವುದು ಎಂದು ತಿಳಿಸಿದೆ.

Cut-off box - null

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.