ADVERTISEMENT

ಮಾರುತಿ, ಟಾಟಾ ವಾಹನ ಬೆಲೆ ಶೀಘ್ರ ಹೆಚ್ಚಳ

ಪಿಟಿಐ
Published 17 ಮಾರ್ಚ್ 2025, 15:03 IST
Last Updated 17 ಮಾರ್ಚ್ 2025, 15:03 IST
   

ನವದೆಹಲಿ: ಮಾರುತಿ ಸುಜುಕಿ ಇಂಡಿಯಾ ಮತ್ತು ಟಾಟಾ ಮೋಟರ್ಸ್‌ ತನ್ನ ವಾಹನಗಳ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದೆ.

ಮಾರುತಿ ಸುಜುಕಿ ತನ್ನ ಕಾರುಗಳ ಬೆಲೆಯನ್ನು ಶೇ 4ರಷ್ಟು ಹೆಚ್ಚಿಸಲು ಮುಂದಾಗಿದೆ. ಪರಿಷ್ಕೃತ ದರವು ಏಪ್ರಿಲ್‌ನಿಂದ ಜಾರಿಯಾಗಲಿದೆ. 

ಏಪ್ರಿಲ್‌ 1ರಿಂದ ವಾಣಿಜ್ಯ ವಾಹನಗಳ ಬೆಲೆಯನ್ನು ಶೇ 2ರಷ್ಟು ಹೆಚ್ಚಳ ಮಾಡುವುದಾಗಿ ಟಾಟಾ ಮೋಟರ್ಸ್‌ ತಿಳಿಸಿದೆ.

ADVERTISEMENT

ತಯಾರಿಕಾ ಮತ್ತು ಕಾರ್ಯಾಚರಣೆ ವೆಚ್ಚಗಳಲ್ಲಿ ಉಂಟಾಗಿರುವ ಏರಿಕೆಯನ್ನು ಸರಿದೂಗಿಸಲು ಈ ಬೆಲೆ ಏರಿಕೆ ಮಾಡಲಾಗುತ್ತಿದೆ. ದರ ಏರಿಕೆಯು ವಾಹನದ ಮಾದರಿಯ ಮೇಲೆ ಅವಲಂಬಿಸಿರುತ್ತದೆ ಎಂದು ಕಂಪನಿ ಷೇರುಪೇಟೆಗೆ ಸೋಮವಾರ ತಿಳಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.