ADVERTISEMENT

₹ 270 ಲಕ್ಷ ಕೋಟಿಗೆ ತಲುಪಿದ ಮಾರುಕಟ್ಟೆ ಬಂಡವಾಳ ಮೌಲ್ಯ

ಪಿಟಿಐ
Published 13 ಅಕ್ಟೋಬರ್ 2021, 16:41 IST
Last Updated 13 ಅಕ್ಟೋಬರ್ 2021, 16:41 IST
ಮುಂಬೈ ಷೇರುಪೇಟೆ
ಮುಂಬೈ ಷೇರುಪೇಟೆ   

ನವದೆಹಲಿ: ಮುಂಬೈ ಷೇರುಪೇಟೆಯಲ್ಲಿ ನೋಂದಾಯಿತ ಆಗಿರುವ ಕಂಪನಿಗಳ ಒಟ್ಟು ಮಾರುಕಟ್ಟೆ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ₹ 270 ಲಕ್ಷ ಕೋಟಿಗೆ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯ ಮಟ್ಟ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ 452 ಅಂಶ ಏರಿಕೆ ಕಂಡಿತು. 60,737 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು. ಐದು ದಿನಗಳಲ್ಲಿ ಸೆನ್ಸೆಕ್ಸ್ ಒಟ್ಟು 1,547 ಅಂಶ ಏರಿಕೆ ಕಂಡಿದೆ. ಐದು ದಿನಗಳಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯವು ₹ 8.52 ಲಕ್ಷ ಕೋಟಿ ಹೆಚ್ಚಳವಾಗಿದೆ.

ಹಬ್ಬದ ಋತು ಶುರುವಾಗಿರುವ ಕಾರಣ ದೇಶದ ಷೇರು ಪೇಟೆಗಳಲ್ಲಿ ಉತ್ಸಾಹದ ವಹಿವಾಟು ನಡೆದಿದೆ. ಆಟೊಮೊಬೈಲ್, ಲೋಹ, ಇಂಧನ ವಲಯದ ಷೇರುಗಳ ಖರೀದಿಗೆ ಜೋರಾಗಿದೆ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 169 ಅಂಶ ಏರಿಕೆ ಕಂಡಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 15 ಪೈಸೆಯಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.