ನವದೆಹಲಿ: ಐಷಾರಾಮಿ ಕಾರು ತಯಾರಿಕಾ ಕಂಪನಿ ಮರ್ಸಿಡೀಸ್ ಬೆಂಜ್ ಇಂಡಿಯಾ, ತನ್ನ ವಾಹನಗಳ ಬೆಲೆಯನ್ನು ಸೆಪ್ಟೆಂಬರ್‌ನಿಂದ ಶೇ 1ರಿಂದ ಶೇ 1.5ರಷ್ಟು ಹೆಚ್ಚಳ ಮಾಡಲು ಯೋಜಿಸಿದೆ.
ಕಂಪನಿಯು ಪ್ರಸಕ್ತ ವರ್ಷದ ಜನವರಿ ಮತ್ತು ಜುಲೈನಲ್ಲಿ ದರ ಹೆಚ್ಚಳ ಮಾಡಿದೆ. ಇದೀಗ ಮೂರನೇ ಬಾರಿ ದರ ಹೆಚ್ಚಳಕ್ಕೆ ಮುಂದಾಗಿದೆ.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಯುರೊ ಎದುರು ರೂಪಾಯಿ ಮೌಲ್ಯ ಇಳಿಕೆ ಆಗುತ್ತಿದೆ. ಹೀಗಾಗಿ ದರ ಹೆಚ್ಚಳದ ನಿರ್ಧಾರ ಕೈಗೊಳ್ಳಲಾಗುತ್ತಿದೆ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸಂತೋಷ್ ಅಯ್ಯರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.