ADVERTISEMENT

ಲೆನ್ಸ್‌ಕಾರ್ಟ್‌ ಮನವಿಗೆ ಸ್ಪಂದಿಸಿದ ಸಚಿವ ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2024, 16:20 IST
Last Updated 10 ಏಪ್ರಿಲ್ 2024, 16:20 IST
ಎಂ.ಬಿ. ಪಾಟೀಲ
ಎಂ.ಬಿ. ಪಾಟೀಲ   

ಬೆಂಗಳೂರು: ಜಮೀನು ಖರೀದಿಗೆ ಸಂಬಂಧಿಸಿದಂತೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದ ಲೆನ್ಸ್‌ಕಾರ್ಟ್ ಸಮೂಹದ ಮನವಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು, ಕೇವಲ ಐದು ನಿಮಿಷದಲ್ಲಿ ಸ್ಪಂದಿಸಿ ಗಮನ ಸೆಳೆದಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 60 ಕಿ.ಮೀ. ಆಸುಪಾಸಿನಲ್ಲಿ ತಮ್ಮ ಉದ್ಯಮದ ಘಟಕ ಸ್ಥಾಪನೆಗಾಗಿ 25 ಎಕರೆ ಜಮೀನಿನ ಅಗತ್ಯವಿದೆ ಎಂದು ಲೆನ್ಸ್‌ಕಾರ್ಟ್ ಸಹ ಸಂಸ್ಥಾಪಕ ಮತ್ತು ಸಿಇಒ ಪೀಯೂಷ್ ಬನ್ಸಾಲ್, ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿದ್ದರು. ಜಮೀನು ಮಾರಾಟ ಮಾಡಲು ಆಸಕ್ತಿ ಇದ್ದರೆ ತಮಗೆ ಇ-ಮೇಲ್ ಕಳುಹಿಸುವಂತೆಯೂ ಕೋರಿದ್ದರು.

ಈ ಪೋಸ್ಟ್‌ ಗಮನಿಸಿದ ಸಚಿವರು, ‘ಕೈಗಾರಿಕಾ ಇಲಾಖೆಯು ನಿಮ್ಮ ಬೆಂಬಲಕ್ಕಿದೆ. ಅಧಿಕಾರಿಗಳು ತಕ್ಷಣವೇ ನಿಮ್ಮನ್ನು ಸಂಪರ್ಕಿಸಲಿದ್ದಾರೆ. ನೀವು ಇರಬೇಕಾದ ಜಾಗ ಕರ್ನಾಟಕ!’ ಎಂದು ಮರುಪೋಸ್ಟ್ ಮಾಡಿ ಭರವಸೆ ನೀಡಿದ್ದಾರೆ.

ADVERTISEMENT

ಅಲ್ಲದೆ, ಕಂಪನಿಗೆ ಜಮೀನು ಒದಗಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.