ಮುಂಬೈ: 2024–25ರ ಆರ್ಥಿಕ ವರ್ಷದ ಮಾರ್ಚ್ ತ್ರೈಮಾಸಿಕದಲ್ಲಿ ವಾಹನ ತಯಾರಿಕ ಕಂಪನಿ ಮಹೀಂದ್ರ ಆ್ಯಂಡ್ ಮಹೀಂದ್ರ ₹3,541 ಕೋಟಿ ತೆರಿಗೆ ನಂತರದ ಲಾಭ (ಪಿಎಟಿ) ಗಳಿಸಿದೆ.
2023–24ರ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ₹3,124 ಕೋಟಿ ಗಳಿಸಿತ್ತು. ಈ ಲಾಭಕ್ಕೆ ಹೋಲಿಸಿದರೆ ಶೇ 13ರಷ್ಟು ಏರಿಕೆಯಾಗಿದೆ ಎಂದು ಕಂಪನಿ ಸೋಮವಾರ ಷೇರುಪೇಟೆಗೆ ತಿಳಿಸಿದೆ.
ವರಮಾನ ₹42,585 ಕೋಟಿಯಾಗಿದೆ. ಒಟ್ಟು ವೆಚ್ಚ ₹39,113 ಕೋಟಿಯಷ್ಟಾಗಿದೆ. ವಾಹನಗಳ ಮಾರಾಟದಲ್ಲಿ ಶೇ 18ರಷ್ಟು ಏರಿಕೆಯಾಗಿದ್ದು, 2.53 ಲಕ್ಷ ವಾಹನಗಳು ಮಾರಾಟವಾಗಿವೆ.
2024–25ರ ಪೂರ್ಣ ಆರ್ಥಿಕ ವರ್ಷದಲ್ಲಿ ₹14,073 ಕೋಟಿ ತೆರಿಗೆ ನಂತರದ ಲಾಭ ಗಳಿಸಿದೆ. ವರಮಾನ ₹1.58 ಲಕ್ಷ ಕೋಟಿಯಾಗಿದೆ ಎಂದು ತಿಳಿಸಿದೆ.
ಕಂಪನಿಯ ಆಡಳಿತ ಮಂಡಳಿಯು ಪ್ರತಿ ಷೇರಿಗೆ ₹25.30 ಅಂತಿಮ ಲಾಭಾಂಶ ನೀಡಲು ಶಿಫಾರಸು ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.