ನವದೆಹಲಿ: 2024–25ನೇ ಆರ್ಥಿಕ ವರ್ಷದಲ್ಲಿ ಭಾರತವು ₹2 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್‌ಗಳನ್ನು ರಫ್ತು ಮಾಡಿದೆ. ಈ ಪೈಕಿ ಐಫೋನ್‌ಗಳ ಮೌಲ್ಯ ₹1.5 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರ ಸಂವಹನ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
2023–24ನೇ ಸಾಲಿಗೆ ಹೋಲಿಸಿದರೆ ಸ್ಮಾರ್ಟ್‌ಫೋನ್‌ಗಳ ರಫ್ತಿನಲ್ಲಿ ಶೇ 54ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಐಫೋನ್‌ಗಳ ಪಾಲು ಹೆಚ್ಚಿದೆ ಎಂದು ಹೇಳಿದ್ದಾರೆ.
ದೇಶದಲ್ಲಿ ಎಲೆಕ್ಟ್ರಾನಿಕ್ಸ್ ಉಪಕರಣಗಳ ತಯಾರಿಕೆಯು ಹೆಚ್ಚಳವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ತಯಾರಿಕೆಯಲ್ಲಿ ಐದು ಪಟ್ಟು ಮತ್ತು ರಫ್ತಿನಲ್ಲಿ ಆರು ಪಟ್ಟು ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.