ADVERTISEMENT

ಜಿಡಿಪಿ ಅಂದಾಜು ಇಳಿಕೆ

ಪಿಟಿಐ
Published 11 ಮೇ 2022, 16:01 IST
Last Updated 11 ಮೇ 2022, 16:01 IST
   

ಮುಂಬೈ: 2022–23 ಹಾಗೂ 2023–24ನೇ ಸಾಲಿನ ಭಾರತದ ಅರ್ಥ ವ್ಯವಸ್ಥೆಯ ಬೆಳವಣಿಗೆ ದರದ ಅಂದಾಜನ್ನು ಮಾರ್ಗನ್ ಸ್ಟ್ಯಾನ್ಲಿ ಸಂಸ್ಥೆಯು ಶೇ 0.30ರಷ್ಟು ತಗ್ಗಿಸಿದೆ. ಮುಂದಿನ ದಿನಗಳಲ್ಲಿ ಹಣದುಬ್ಬರವು ಇನ್ನಷ್ಟು ಹೆಚ್ಚಾಗುವ ಅಪಾಯವಿದೆ ಎಂದು ಹೇಳಿದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಶೇ 7.6ರಷ್ಟು ಬೆಳವಣಿಗೆ ಕಾಣಲಿದೆ, ಮುಂದಿನ ಆರ್ಥಿಕ ವರ್ಷದಲ್ಲಿ ಶೇ 6.7ರಷ್ಟು ಬೆಳವಣಿಗೆ ಕಾಣಲಿದೆ ಎಂದು ಸಂಸ್ಥೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT