ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮದರ್ ಡೇರಿಯ ವಹಿವಾಟು ₹17 ಸಾವಿರ ಕೋಟಿ ತಲುಪುವ ನಿರೀಕ್ಷೆಯಿದೆ. ಒಟ್ಟಾರೆ ಶೇ 15ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಡೇರಿಯ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಬಂದ್ಲೀಷ್ ತಿಳಿಸಿದ್ದಾರೆ.
ದೇಶದಾದ್ಯಂತ ಡೇರಿಯ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದೆ. ಹಾಗಾಗಿ, ಮಾರಾಟ ಜಾಲವನ್ನು ಮತ್ತಷ್ಟು ವಿಸ್ತರಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದ್ದಾರೆ.
2023–24ರಲ್ಲಿ ₹15,037 ಕೋಟಿ ವಹಿವಾಟು ನಡೆಸಿತ್ತು.
ಮದರ್ ಡೇರಿಯು ತಾಜಾ ಹಾಗೂ ಇತರೆ ಹೈನು ಉತ್ಪನ್ನಗಳ ಹೊರತಾಗಿ ಧಾರಾ ಬ್ರ್ಯಾಂಡ್‌ನಡಿ ಖಾದ್ಯ ತೈಲವನ್ನು ಮಾರಾಟ ಮಾಡುತ್ತದೆ. ಸಫಲ್ ಹೆಸರಿನಡಿ ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಮಾರಾಟ ಮಾಡುತ್ತದೆ. ದೆಹಲಿಯಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಹಾಲು ಪೂರೈಸುತ್ತದೆ.
ಮಹಾರಾಷ್ಟ್ರದ ನಾಗಪುರದಲ್ಲಿ ಅತಿದೊಡ್ಡ ಹಾಲು ಸಂಸ್ಕರಣಾ ಘಟಕ ಸ್ಥಾಪಿಸುತ್ತಿದೆ. ಇದಕ್ಕಾಗಿ ₹500 ಕೋಟಿ ವಿನಿಯೋಗಿಸಿದೆ. ಮುಂದಿನ ವರ್ಷದಿಂದ ಈ ಘಟಕ ಕಾರ್ಯಾರಂಭ ಮಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.