ADVERTISEMENT

ಮ್ಯೂಚುವಲ್‌ ಫಂಡ್‌ ಸಂಪತ್ತು ವೃದ್ಧಿ

ಪಿಟಿಐ
Published 24 ಡಿಸೆಂಬರ್ 2024, 14:03 IST
Last Updated 24 ಡಿಸೆಂಬರ್ 2024, 14:03 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಪ್ರಸಕ್ತ ವರ್ಷದಲ್ಲಿ ಮ್ಯೂಚುವಲ್‌ ಫಂಡ್‌ ಉದ್ಯಮದ ನಿರ್ವಹಣಾ ಸಂಪತ್ತಿಗೆ ₹17 ಲಕ್ಷ ಕೋಟಿ ಸೇರ್ಪಡೆಯಾಗಿದೆ ಎಂದು ಭಾರತೀಯ ಮ್ಯೂಚುವಲ್‌ ಫಂಡ್‌ ಕಂಪನಿಗಳ ಒಕ್ಕೂಟ (ಎಎಂಎಫ್‌ಐ) ತಿಳಿಸಿದೆ.

ಷೇರು ಮಾರುಕಟ್ಟೆಯು ಏರಿಕೆ ಕಂಡಿದೆ. ದೇಶದ ಆರ್ಥಿಕತೆ ಬೆಳವಣಿಗೆ ಸದೃಢವಾಗಿದೆ. ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ, ನಿರ್ವಹಣಾ ಸಂಪತ್ತು ಕೂಡ ವೃದ್ಧಿಯಾಗಿದೆ. ಮುಂದಿನ ವರ್ಷವೂ ಇದೇ ಬೆಳವಣಿಗೆ ಮುಂದುವರಿಯಲಿದೆ ಎಂದು ಹೇಳಿದೆ.

ಈಕ್ವಿಟಿ ಫಂಡ್‌ಗಳಲ್ಲಿ ಸಣ್ಣ ಹೂಡಿಕೆದಾರರು ಹೆಚ್ಚು ಹೂಡಿಕೆ ಮಾಡುತ್ತಿದ್ದಾರೆ. ವ್ಯವಸ್ಥಿತ ಹೂಡಿಕೆ ಯೋಜನೆ (ಎಸ್ಐಪಿ) ಮೂಲಕವೂ ಹೂಡಿಕೆ ಹೆಚ್ಚುತ್ತಿದೆ ಎಂದು ಹೇಳಿದೆ. 

ADVERTISEMENT

ಪ್ರಸಕ್ತ ವರ್ಷದಲ್ಲಿ ಹೂಡಿಕೆದಾರರ ಸಂಖ್ಯೆ 5.6 ಕೋಟಿ ಹೆಚ್ಚಳವಾಗಿದೆ. ಎಸ್‌ಐಪಿ ಮೂಲಕ ₹2.40 ಲಕ್ಷ ಕೋಟಿ ಹೂಡಿಕೆಯಾಗಿದೆ ಎಂದು ವಿವರಿಸಿದೆ. 

2023ರಲ್ಲಿ ಮ್ಯೂಚುವಲ್‌ ಫಂಡ್‌ ಉದ್ಯಮದ ಸಂಪತ್ತಿನ ನಿರ್ವಹಣಾ ಮೌಲ್ಯವು (ಎಯುಎಂ) ₹50.78 ಲಕ್ಷ ಕೋಟಿ ಇತ್ತು. ಈ ವರ್ಷದ ನವೆಂಬರ್‌ ಅಂತ್ಯಕ್ಕೆ ₹68 ಲಕ್ಷ ಕೋಟಿಗೆ ಮುಟ್ಟಿದೆ. ಒಟ್ಟಾರೆ ಶೇ 33ರಷ್ಟು ಏರಿಕೆಯಾಗಿದೆ. ಕಳೆದ ನಾಲ್ಕು ವರ್ಷದಲ್ಲಿ ಸಂಪತ್ತಿನ ನಿರ್ವಹಣಾ ಮೌಲ್ಯಕ್ಕೆ ₹30 ಲಕ್ಷ ಕೋಟಿ ಸೇರ್ಪಡೆಯಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.