ADVERTISEMENT

ನಬಾರ್ಡ್‌: ಆದ್ಯತಾ ಸಾಲ ಪತ್ರ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2019, 19:02 IST
Last Updated 12 ಮಾರ್ಚ್ 2019, 19:02 IST

ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ (ನಬಾರ್ಡ್‌), ಕರ್ನಾಟಕ ಪ್ರಾದೇಶಿ ಕಚೇರಿ ಆಯೋಜಿಸಿದ್ದ 2019–20ರ ಸಾಲಕ್ಕೆ ಸಂಬಂಧಿಸಿದ ವಿಚಾರಗೋಷ್ಠಿಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯ್ ಭಾಸ್ಕರ್‌ ಅವರು ರಾಜ್ಯದ ಆದ್ಯತಾ ಪತ್ರವನ್ನು ಬಿಡುಗಡೆ ಮಾಡಿದರು.

ಅದರಂತೆ, ಆದ್ಯತಾ ವಲಯದ ಸಾಲದ ಪ್ರಮಾಣವನ್ನು ₹ 2.34 ಲಕ್ಷ ಕೋಟಿಗೆ ನಿಗದಿಪಡಿಸಲಾಗಿದೆ. ಇದು ಕಳೆದ ವರ್ಷಕ್ಕಿಂತ ಶೇ 16ರಷ್ಟು ಹೆಚ್ಚಿಗೆ ಇದೆ. ಕೃಷಿಗೆ ₹ 1.40 ಲಕ್ಷ ಕೋಟಿ ನಿಗದಿಪಡಿಸಲಾಗಿದೆ. ವಿವಿಧ ಆದ್ಯತಾ ವಲಯಗಳಿಗೆ ಅಗತ್ಯವಿರುವ ಹಣಕಾಸು ನೆರವಿನ ಕುರಿತು ‘ನಬಾರ್ಡ್‌’ ಸಿದ್ಧಪಡಿಸಿರುವ ಆದ್ಯತಾ ಪತ್ರಕ್ಕೆ ಮುಖ್ಯ ಕಾರ್ಯದರ್ಶಿ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಾಲದ ಯೋಜನೆಯು ಯಶಸ್ವಿಯಾಗಿ ಕಾರ್ಯಗತಗೊಳ್ಳಿ ಎಂದು ಶುಭ ಹಾರೈಸಿದ್ದಾರೆ.

ರೈತರ ಶ್ರೇಯೋಭಿವೃದ್ಧಿಗೆ ರಾಜ್ಯ ಸರ್ಕಾರ ಹಮ್ಮಿಕೊಂಡಿರುವ ವಿವಿಧ ಯೋಜನೆಗಳಿಗೆ ಅಗತ್ಯ ಬಂಡವಾಳವನ್ನು ಹೊಂದಿಸಿಕೊಳ್ಳುವಂತೆಯೂ ಸೂಚನೆ ನೀಡಿದರು. ‘ನಬಾರ್ಡ್‌’ನ ಚೀಫ್‌ ಜನರಲ್‌ ಮ್ಯಾನೇಜರ್‌ ಪಿ. ವಿ. ಎಸ್‌. ಸೂರ್ಯಕುಮಾರ್‌ ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.