ಬೆಂಗಳೂರು: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ (ನಬಾರ್ಡ್) ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕರಾಗಿ (ಸಿಜಿಎಂ) ಸುರೇಂದ್ರ ಬಾಬು ಅಧಿಕಾರ ಸ್ವೀಕರಿಸಿದ್ದಾರೆ.
ಅವರು ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಿಂದ (ಐಎಆರ್‌ಐ) ಎಂ.ಎಸ್ಸಿ, ಮತ್ತು ಪಿಎಚ್.ಡಿ ಪದವಿ ಪಡೆದಿದ್ದಾರೆ. ಸಿಜಿಎಂ ಆಗಿ ನೇಮಕಗೊಳ್ಳುವ ಮೊದಲು ಲಖನೌದ ರಾಷ್ಟ್ರೀಯ ಬ್ಯಾಂಕ್‌ಗಳ ಸಿಬ್ಬಂದಿ ಕಾಲೇಜಿನಲ್ಲಿ ಉಪ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
1992ರಲ್ಲಿ ವೃತ್ತಿ ಜೀವನ ಆರಂಭಿಸಿದ ಅವರು, ನಬಾರ್ಡ್‌ನ ಪ್ರಮುಖ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.