ADVERTISEMENT

Nandini Milk Price Hike | ನಂದಿನಿ ಹಾಲು, ಮೊಸರಿನ ದರ ಲೀಟರ್‌ಗೆ ₹3 ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 9:49 IST
Last Updated 14 ನವೆಂಬರ್ 2022, 9:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳವು (ಕೆಎಂಎಫ್) ನಂದಿನಿ ಬ್ರ್ಯಾಂಡ್ ನ ಎಲ್ಲ ಮಾದರಿಯ ಹಾಲು ಮತ್ತು ಮೊಸರಿನ ದರವನ್ನು ಪ್ರತಿ ಲೀಟರ್‌ಗೆ ₹3 ಹೆಚ್ಚಳ‌ ಮಾಡಿದೆ.

ಚರ್ಮ ಗಂಟು ರೋಗ, ಅತಿವೃಷ್ಟಿ ಮತ್ತಿತರ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗಲು ಹಾಲಿನ ದರ ಹೆಚ್ಚಳ ಮಾಡಲಾಗಿದೆ. ಹೆಚ್ಚಳ ಮಾಡಿರುವ ಪೂರ್ಣ ಮೊತ್ತವನ್ನು ರೈತರಿಗೆ ವರ್ಗಾಯಿಸಲು ತೀರ್ಮಾನಿಸಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.

ರಾಜ್ಯದಲ್ಲಿ ಹಾಲು ಉತ್ಪಾದನೆಯ ಪ್ರಮಾಣ 95 ಲಕ್ಷ ಲೀಟರ್ ನಿಂದ 78 ಲಕ್ಷ ಲೀಟರ್ ಗೆ ಕುಸಿದಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.