ನವದೆಹಲಿ: ಬುಧವಾರ (ಜ. 8) ಕರೆ ನೀಡಿರುವ ಸಾರ್ವತ್ರಿಕ ಮುಷ್ಕರದಲ್ಲಿ ದೇಶದಾದ್ಯಂತ 25 ಕೋಟಿ ಜನರು ಭಾಗವಹಿಸಲಿದ್ದಾರೆ ಎಂದು 10 ಕಾರ್ಮಿಕ ಸಂಘಟನೆಗಳು ಹೇಳಿವೆ.
ಕಾರ್ಮಿಕರು, ಜನಸಾಮಾನ್ಯರು ಮತ್ತು ರಾಷ್ಟ್ರೀಯ ಹಿತಾಸಕ್ತಿಗೆ ಮಾರಕವಾದ ನಿಲುವನ್ನು ತಳೆದಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಈ ಮುಷ್ಕರಕ್ಕೆ ಕರೆ ನೀಡಲಾಗಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಖಾಸಗೀಕರಣ ಪ್ರಯತ್ನವನ್ನೂ ಈ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ.
ಕಾರ್ಮಿಕರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಇದೇ 2ರಂದು ಕರೆದಿದ್ದ ಸಭೆಯು ವಿಫಲವಾಗಿರುವುದರಿಂದ ಅನಿವಾರ್ಯವಾಗಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.