ADVERTISEMENT

ಮುಂದಿನ ವರ್ಷದಲ್ಲಿ ಮನೆಗಳ ಬೆಲೆಯಲ್ಲಿ ಶೇ 5ರಷ್ಟು ಹೆಚ್ಚಳ ನಿರೀಕ್ಷೆ

ಪಿಟಿಐ
Published 20 ಡಿಸೆಂಬರ್ 2025, 13:09 IST
Last Updated 20 ಡಿಸೆಂಬರ್ 2025, 13:09 IST
ಮನೆ
ಮನೆ   

ನವದೆಹಲಿ: ಮುಂದಿನ ವರ್ಷದಲ್ಲಿ ಮನೆಗಳ ಬೆಲೆಯಲ್ಲಿ ಶೇ 5ಕ್ಕೂ ಹೆಚ್ಚು ಏರಿಕೆ ಆಗಲಿದೆ ಎಂದು ಕ್ರೆಡಾಯ್‌–ಸಿಆರ್‌ಇ ಮ್ಯಾಟ್ರಿಕ್ಸ್‌ ಜಂಟಿ ಸಮೀಕ್ಷೆ ವರದಿ ತಿಳಿಸಿದೆ.

ಮನೆಗಳಿಗೆ ಹೆಚ್ಚುತ್ತಿರುವ ಬೇಡಿಕೆಯೇ ಬೆಲೆ ಏರಿಕೆಗೆ ಕಾರಣ ಎಂದು ತಿಳಿಸಿದೆ.  

ರಿಯಲ್ ಎಸ್ಟೇಟ್ ಕಂಪನಿಗಳ ಒಕ್ಕೂಟ ಕ್ರೆಡಾಯ್‌ ಮತ್ತು ದತ್ತಾಂಶ ವಿಶ್ಲೇಷಣಾ ಸಂಸ್ಥೆ ಸಿಆರ್‌ಇ ಮ್ಯಾಟ್ರಿಕ್ಸ್ ನವೆಂಬರ್‌ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ 647 ಡೆವಪಲರ್‌ಗಳು ಭಾಗವಹಿಸಿದ್ದರು. ಈ ಪೈಕಿ ಶೇ 68ರಷ್ಟು ಡೆವಲಪರ್‌ಗಳು 2026ರಲ್ಲಿ ಮನೆಗಳ ಬೆಲೆಯು ಶೇ 5ಕ್ಕಿಂತ ಹೆಚ್ಚು ಏರಿಕೆ ಆಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.