ADVERTISEMENT

ಎನ್‌ಇಎಫ್‌ಟಿ ಸೌಲಭ್ಯ: ಭಾನುವಾರ 14 ತಾಸು ಸ್ಥಗಿತ

ಪಿಟಿಐ
Published 17 ಮೇ 2021, 14:28 IST
Last Updated 17 ಮೇ 2021, 14:28 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುಂಬೈ: ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಮಧ್ಯಾಹ್ನದವರೆಗೆ ಒಟ್ಟು 14 ತಾಸುಗಳು ಎನ್‌ಇಎಫ್‌ಟಿ ಸೌಲಭ್ಯ ಇರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

ತಾಂತ್ರಿಕ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ನಡೆಸಬೇಕಿರುವುದರಿಂದ ಅದು ಕೆಲಸ ಮಾಡುವುದಿಲ್ಲ.ಭಾನುವಾರ ಮಧ್ಯಾಹ್ನ 2 ಗಂಟೆಯ ನಂತರ ಎನ್‌ಇಎಫ್‌ಟಿ ಸೇವೆ ಬಳಕೆಗೆ ಲಭ್ಯವಾಗಲಿದೆ ಎಂದು ತಿಳಿಸಿದೆ. ಈ ಅವಧಿಯಲ್ಲಿ ಆರ್‌ಟಿಜಿಎಸ್‌ ವ್ಯವಸ್ಥೆಯು ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಆರ್‌ಬಿಐ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT