
ಪ್ರಜಾವಾಣಿ ವಾರ್ತೆ
ಮುಂಬೈ (ಪಿಟಿಐ): ರೆಪೊ ದರವು ಹೆಚ್ಚಳ ಆಗುವ ಸಾಧ್ಯತೆಯು ಈಗ ಬಹಳ ಕಡಿಮೆ ಎಂದು ಆರ್‌ಬಿಐನ ಹಣಕಾಸು ನೀತಿ ಸಮಿತಿಯು (ಎಂಪಿಸಿ) ಬಾಹ್ಯ ಸದಸ್ಯ ಸೌಗತ ಭಟ್ಟಾಚಾರ್ಯ ಬುಧವಾರ ಹೇಳಿದ್ದಾರೆ.
ಹವಾಮಾನಕ್ಕೆ ಸಂಬಂಧಿಸಿದ ಸಮಸ್ಯೆಗಳು, ಲೋಹಗಳ ಬೆಲೆ ಹೆಚ್ಚಾಗುತ್ತಿರುವುದು ಹಾಗೂ ಜಾಗತಿಕ ಮಟ್ಟದಲ್ಲಿನ ಬಿಕ್ಕಟ್ಟುಗಳ ಕಾರಣದಿಂದಾಗಿ ಕಚ್ಚಾ ತೈಲದ ಬೆಲೆಯಲ್ಲಿನ ಹೆಚ್ಚಳವು ಮುಂದಿನ ದಿನಗಳಲ್ಲಿ ಗ್ರಾಹಕ ಬೆಲೆ ಸೂಚ್ಯಂಕದ (ಸಿಪಿಐ) ಮೇಲೆ ಪರಿಣಾಮ ಬೀರಲಿವೆ ಎಂದು ಅವರು ಹೇಳಿದ್ದಾರೆ.
ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳುವ ಹಾಗೂ ಹಣಕಾಸಿನ ನಿಲುವನ್ನು ‘ತಟಸ್ಥ’ವಾಗಿ ಇರಿಸಿಕೊಳ್ಳುವ ತೀರ್ಮಾನವನ್ನು ಈ ತಿಂಗಳ ಆರಂಭದಲ್ಲಿ ನಡೆದ ಎಂಪಿಸಿ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಅಂದರೆ, ರೆಪೊ ದರವು ಇನ್ನೂ ಒಂದಿಷ್ಟು ಕಾಲ ಕಡಿಮೆ ಮಟ್ಟದಲ್ಲಿಯೇ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.