ADVERTISEMENT

ಜಿಎಸ್‌ಟಿ ಇಳಿಕೆ ಲಾಭ ಗ್ರಾಹಕರಿಗೆ: ನೆಸ್ಲೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 14:17 IST
Last Updated 23 ಸೆಪ್ಟೆಂಬರ್ 2025, 14:17 IST
Nestle logo
Nestle logo   

ಬೆಂಗಳೂರು: ಜಿಎಸ್‌ಟಿ ದರ ಇಳಿಕೆಯ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾವಣೆ ಮಾಡಲಾಗುತ್ತಿದೆ ಎಂದು ಎಫ್‌ಎಂಸಿಜಿ ವಲಯದ ‍ಪ್ರಮುಖ ಕಂಪನಿಗಳಲ್ಲಿ ಒಂದಾಗಿರುವ ನೆಸ್ಲೆ ಇಂಡಿಯಾ ಮಂಗಳವಾರ ತಿಳಿಸಿದೆ.

ತೆರಿಗೆ ದರ ಪರಿಷ್ಕರಣೆಯು ಸೆಪ್ಟೆಂಬರ್‌ 22ರಿಂದ ಜಾರಿಗೆ ಬಂದಿದೆ. ‘ಜಿಎಸ್‌ಟಿ ಇಳಿಕೆಯು ಧನಾತ್ಮಕ ಕ್ರಮ. ಇದು ಒಟ್ಟಾರೆ ಅರ್ಥ ವ್ಯವಸ್ಥೆಯ ಬೆಳವಣಿಗೆಗೆ ಕೊಡುಗೆ ಸಲ್ಲಿಸಲಿದೆ’ ಎಂದು ನೆಸ್ಲೆ ಇಂಡಿಯಾದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಮನಿಷ್ ತಿವಾರಿ ಹೇಳಿದ್ದಾರೆ.

ಬೆಲೆಯ ಪರಿಷ್ಕರಣೆಯಲ್ಲಿ ಪಾರದರ್ಶಕತೆಯನ್ನು ಖಾತರಿಪಡಿಸುವ ಉದ್ದೇಶದಿಂದ ನೆಸ್ಲೆ ಇಂಡಿಯಾ ಕಂಪನಿಯು ದರ ಇಳಿಕೆಯ ಬಗ್ಗೆ ವಿವಿಧ ಮಾಧ್ಯಮಗಳ ಮೂಲಕ ಗ್ರಾಹಕರಿಗೆ ತಿಳಿಸಿದೆ ಎಂದು ಪ್ರಕಟಣೆ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.