ADVERTISEMENT

ನೇರ ತೆರಿಗೆಯ ನಿವ್ವಳ ಸಂಗ್ರಹ ಶೇ 68ರಷ್ಟು ಹೆಚ್ಚಳ

ಪಿಟಿಐ
Published 29 ನವೆಂಬರ್ 2021, 11:40 IST
Last Updated 29 ನವೆಂಬರ್ 2021, 11:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ 1ರಿಂದ ನವೆಂಬರ್‌ 23ರವರೆಗೆ ನೇರ ತೆರಿಗೆಯ ನಿವ್ವಳ ಸಂಗ್ರಹವು ₹ 6.92 ಲಕ್ಷ ಕೋಟಿಗಳಷ್ಟಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ಅವರು ಸೋಮವಾರ ತಿಳಿಸಿದ್ದಾರೆ.

2020–21ನೇ ಹಣಕಾಸು ವರ್ಷದಲ್ಲಿ ₹ 4.12 ಲಕ್ಷ ಕೋಟಿ ಸಂಗ್ರಹ ಆಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇ 68ರಷ್ಟು ಏರಿಕೆ ಆಗಿದೆ. 2019–20ನೇ ಹಣಕಾಸು ವರ್ಷದಲ್ಲಿ ಸಂಗ್ರಹ ಆಗಿದ್ದ ₹ 5.44 ಲಕ್ಷ ಕೋಟಿಗೆ ಹೋಲಿಸಿದರೆ ಶೇ 27.29ರಷ್ಟು ಹೆಚ್ಚಾಗಿದೆ ಎಂದು ಅವರು ಲೋಕಸಭೆಗೆ ಮಾಹಿತಿ ನೀಡಿದ್ದಾರೆ.

ನೇರ ತೆರಿಗೆಯ ಸರಾಸರಿ ಸಂಗ್ರಹವು ₹ 8.15 ಲಕ್ಷ ಕೋಟಿಗಳಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 48.11ರಷ್ಟು ಏರಿಕೆ ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ತೆರಿಗೆ ವಂಚನೆ ಪ್ರಕರಣಗಳು ದೆಹಲಿ ಮತ್ತು ಇತರೆ ಭಾಗಗಳಲ್ಲಿ ಹೆಚ್ಚಾಗುತ್ತಿವೆ ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪ್ರತ್ಯೇಕ ಪ್ರಶ್ನೆಯೊಂದಕ್ಕೆ ಅವರು ಉತ್ತರ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.