ADVERTISEMENT

FASTag: ಟೋಲ್‌ನಲ್ಲಿ ಯುಪಿಐ ಬಳಸಿದರೆ ಶುಲ್ಕ ಕಡಿಮೆ!

ಪಿಟಿಐ
Published 4 ಅಕ್ಟೋಬರ್ 2025, 14:57 IST
Last Updated 4 ಅಕ್ಟೋಬರ್ 2025, 14:57 IST
ಫಾಸ್ಟ್‌ಟ್ಯಾಗ್
ಫಾಸ್ಟ್‌ಟ್ಯಾಗ್   

ನವದೆಹಲಿ: ಸಕ್ರಿಯ ಫಾಸ್ಟ್‌ಟ್ಯಾಗ್ ಇಲ್ಲದೆ ಟೋಲ್‌ ಪ್ಲಾಜಾ ಪ್ರವೇಶಿಸುವ ವಾಹನಗಳು ಯುಪಿಐ ಮೂಲಕ ಶುಲ್ಕ ಪಾವತಿ ವಿಧಾನ ಆಯ್ಕೆ ಮಾಡಿಕೊಂಡರೆ, ಸಾಮಾನ್ಯ ಟೋಲ್ ಶುಲ್ಕದ 1.25 ಪಟ್ಟು ಶುಲ್ಕ ವಿಧಿಸಲಾಗುವುದು ಎಂದು ಕೇಂದ್ರ ಸರ್ಕಾರ ಶನಿವಾರ ತಿಳಿಸಿದೆ. 

ಈ ಹೊಸ ನಿಯಮ ನವೆಂಬರ್ 15ರಿಂದ ಜಾರಿಗೆ ಬರಲಿದೆ. ಪ್ರಸ್ತುತ, ಫಾಸ್ಟ್‌ಟ್ಯಾಗ್ ಇಲ್ಲದವರು ಟೋಲ್‌ನಲ್ಲಿ, ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸುವುದಾದರೆ ಎರಡು ಪಟ್ಟು ಹೆಚ್ಚು ಪಾವತಿಸಬೇಕಿದೆ.

ಈ ಹೊಸ ನಿಯಮದಿಂದ ಟೋಲ್‌ನಲ್ಲಿ ನಗದು ವಹಿವಾಟು ಕಡಿಮೆ ಆಗಲಿದೆ. ಅಲ್ಲದೆ, ಡಿಜಿಟಲ್ ಪಾವತಿಗೆ ಉತ್ತೇಜನ ನೀಡಲು, ಟೋಲ್‌ ಕಾರ್ಯಾಚರಣೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಈ ನಿಯಮ ಜಾರಿಗೆ ತರಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.