ನವದೆಹಲಿ: ‘ಮುಂದಿನ ವಾರ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿರುವ ಹೊಸ ಆದಾಯ ತೆರಿಗೆ ಮಸೂದೆಯಲ್ಲಿ ದೀರ್ಘ ವಾಕ್ಯಗಳು ಇರುವುದಿಲ್ಲ. ತೆರಿಗೆದಾರರಿಗೆ ಸುಲಭವಾಗಿ ಅರ್ಥವಾಗುವಂತೆ ಸರಳ ವಿವರಣೆ ಇರಲಿದೆ’ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ತುಹಿನ್ ಕಾಂತಾ ಪಾಂಡೆ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಅವರು, ಮಸೂದೆಯಲ್ಲಿ ತೆರಿಗೆಯ ಷರತ್ತು, ವಿವರಣೆಯು ಸರಳ ಭಾಷೆಯಲ್ಲಿ ಇರಲಿದೆ. ಈ ಮಸೂದೆ ಮೂಲಕ ಜನಸಾಮಾನ್ಯರ ಮೇಲೆ ಹೊಸದಾಗಿ ತೆರಿಗೆ ವಿಧಿಸುವುದಿಲ್ಲ ಅಥವಾ ತೆರಿಗೆ ಹೊರೆ ಹೇರುವುದಿಲ್ಲ. ಅಭದ್ರ ಸ್ಥಿತಿ ಸೃಷ್ಟಿಸುವ ಉದ್ದೇಶವೂ ಸರ್ಕಾರಕ್ಕಿಲ್ಲ’ ಎಂದು ಸ್ಪಷ್ಟಪಡಿಸಿದರು.
ಆರು ದಶಕದಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆಯ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಶುಕ್ರವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಮಸೂದೆಯು ಚರ್ಚೆಗೆ ಬರುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.