
ಪಿಟಿಐ
ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ದೇಶದ ಐ.ಟಿ ಸೇವಾ ಕಂಪನಿ ವಿಪ್ರೊ, ₹3,119 ಕೋಟಿ ನಿವ್ವಳ ಲಾಭ ಗಳಿಸಿದೆ.
ಕಳೆದ ಆರ್ಥಿಕ ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,353 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಲಾಭದಲ್ಲಿ ಶೇ 7ರಷ್ಟು ಇಳಿಕೆಯಾಗಿದೆ. ಹೊಸ ಕಾರ್ಮಿಕ ಸಂಹಿತೆಗಳು ಕಂಪನಿಯ ಲಾಭದ ಮೇಲೆ ಪರಿಣಾಮ ಉಂಟು ಮಾಡಿವೆ ಎಂದು ತಿಳಿಸಿದೆ.
ವರಮಾನವು ಶೇ 5.5ರಷ್ಟು ಹೆಚ್ಚಾಗಿದ್ದು, ₹23,555 ಕೋಟಿಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.