ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು ಸರಾಸರಿ ಶೇ 4ರಿಂದ ಶೇ 5ರಷ್ಟು ಹೆಚ್ಚಿಸಿದೆ. ಈ ಪರಿಷ್ಕೃತ ದರ ಮಂಗಳವಾರದಿಂದ ಜಾರಿಗೆ ಬಂದಿದೆ.
ದೇಶದ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಿಗೆ ಪ್ರತ್ಯೇಕವಾಗಿ ಟೋಲ್ ಶುಲ್ಕ ಹೆಚ್ಚಳದ ಕುರಿತು ಅಧಿಸೂಚನೆಯಲ್ಲಿ ಎನ್‌ಎಚ್ಎಐ ತಿಳಿಸಿದೆ.
ಪ್ರಾಧಿಕಾರವು ವಾರ್ಷಿಕವಾಗಿ ಬಳಕೆದಾರರ ಶುಲ್ಕವನ್ನು ಹೆಚ್ಚಿಸುತ್ತದೆ. ದೇಶದ ಎಲ್ಲಾ ಹೆದ್ದಾರಿಗಳಿಗೂ ಅನ್ವಯಿಸುವ ಈ ಪರಿಷ್ಕರಣೆಯು ಏಪ್ರಿಲ್ 1ರಿಂದ ಜಾರಿಗೆ ಬರುತ್ತದೆ. ಪ್ರತಿವರ್ಷವೂ ಸಗಟು ಹಣದುಬ್ಬರ ಆಧಾರದ ಮೇಲೆ ಬಳಕೆದಾರರ ಶುಲ್ಕವನ್ನು ಪರಿಷ್ಕರಿಸಲಾಗುತ್ತದೆ ಎಂದು ಪ್ರಾಧಿಕಾರ ತಿಳಿಸಿದೆ.
ದೇಶದಲ್ಲಿ ಒಟ್ಟು 855 ಟೋಲ್ ಪ್ಲಾಜಾಗಳಿವೆ. ಈ ಪೈಕಿ 675 ಪ್ಲಾಜಾಗಳು ಸರ್ಕಾರದ ನೆರವಿನೊಂದಿಗೆ ಕಾರ್ಯಾಚರಣೆ ನಡೆಸುತ್ತವೆ. ಉಳಿದ 180 ಪ್ಲಾಜಾಗಳು ಖಾಸಗಿ ಕಂಪನಿಗಳ ಮೇಲ್ವಿಚಾರಣೆಯಲ್ಲಿ ಕಾರ್ಯಾಚರಣೆ ನಡೆಸುತ್ತವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.