ನವದೆಹಲಿ: ಹೆದ್ದಾರಿಗಳಲ್ಲಿ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‌ಎಚ್‌ಎಐ) ‘ರಾಜಮಾರ್ಗ ಸಾಥಿ’ ಹೆಸರಿನ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ (ಎ.ಐ) ಅಳವಡಿಸಿರುವ ರಸ್ತೆ ಗಸ್ತು ವಾಹನಗಳ (ಆರ್‌ಪಿವಿ) ನಿಯೋಜನೆಗೆ ನಿರ್ಧರಿಸಿದೆ.
ಹೆದ್ದಾರಿಗಳಲ್ಲಿ ಸಂಭವಿಸುವ ಅವಘಡಗಳಿಗೆ ತುರ್ತಾಗಿ ಸ್ಪಂದಿಸಲು ಮತ್ತು ಮೇಲ್ವಿಚಾರಣೆ ಮಾಡಲು ಈ ವಾಹನಗಳು ನೆರವಾಗಲಿವೆ ಎಂದು ಪ್ರಾಧಿಕಾರ ತಿಳಿಸಿದೆ.
ಈ ವಾಹನಗಳಲ್ಲಿ ಎ.ಐ ವಿಡಿಯೊ ವಿಶ್ಲೇಷಣಾ ಸಾಧನಗಳನ್ನು ಅಳವಡಿಸಲಾಗಿದೆ. ಹೆದ್ದಾರಿಗಳಲ್ಲಿನ ಬಿರುಕುಗಳು, ಗುಂಡಿಗಳನ್ನು ಪತ್ತೆ ಹಚ್ಚಲಿವೆ. ವಾಹನಗಳ ಸುಗಮ ಸಂಚಾರ ಮತ್ತು ಪ್ರಯಾಣಿಕರ ಸುರಕ್ಷತೆಗೆ ಇದರಿಂದ ನೆರವಾಗಲಿದೆ ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.