ADVERTISEMENT

ದಾಖಲೆಯ ಮಟ್ಟದಲ್ಲಿ ನಿಫ್ಟಿ

ಪಿಟಿಐ
Published 31 ಮೇ 2021, 19:43 IST
Last Updated 31 ಮೇ 2021, 19:43 IST

ಮುಂಬೈ: ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸಂವೇದಿ ಸೂಚ್ಯಂಕ ನಿಫ್ಟಿ ಸೋಮವಾರದ ವಹಿವಾಟಿನಲ್ಲಿ 147 ಅಂಶ ಏರಿಕೆ ಕಂಡು, 15,582 ಅಂಶಗಳಿಗೆ ತಲುಪಿತು. ಇದು ನಿಫ್ಟಿಯ ಸಾರ್ವಕಾಲಿಕ ಗರಿಷ್ಠ ಮಟ್ಟ.

ಕೋವಿಡ್‌ ಪ್ರಕರಣಗಳ ಸಂಖ್ಯೆಯು ಇಳಿಮುಖ ಆಗುತ್ತಿರುವುದು ಹೂಡಿಕೆದಾರರಲ್ಲಿ ಉತ್ಸಾಹ ಮೂಡಿಸಿತು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 514 ಅಂಶ ಏರಿಕೆ ದಾಖಲಿಸಿತು. ರಿಲಯನ್ಸ್ ಇಂಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್, ಭಾರ್ತಿ ಏರ್‌ಟೆಲ್‌, ಡಾ ರೆಡ್ಡೀಸ್, ಮಾರುತಿ, ಐಟಿಸಿ, ಎನ್‌ಟಿಪಿಸಿ ಮತ್ತು ಎಕ್ಸಿಸ್ ಬ್ಯಾಂಕ್ ಷೇರುಗಳು ಏರಿಕೆ ಕಂಡವು.

ಮಹೀಂದ್ರ ಆ್ಯಂಡ್ ಮಹೀಂದ್ರ, ಇನ್ಫೊಸಿಸ್, ಎಲ್‌ಆ್ಯಂಡ್‌ಟಿ, ಇಂಡಸ್‌ಇಂಡ್ ಬ್ಯಾಂಕ್, ಟೆಕ್ ಮಹೀಂದ್ರ ಮತ್ತು ಸನ್ ಫಾರ್ಮಾ ಷೇರುಗಳು ಕುಸಿತ ಕಂಡವು.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ಬೆಲೆಯಲ್ಲಿ ಶೇಕಡ 1.08ರಷ್ಟು ಏರಿಕೆ ಆಗಿದೆ. ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 69.46 ಅಮೆರಿಕನ್‌ ಡಾಲರ್‌ಗೆ ಮಾರಾಟವಾಗಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 17 ಪೈಸೆಯಷ್ಟು ತಗ್ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.