ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕಂಪನಿಗಳ ಆಡಳಿತಕ್ಕೆ ಸಂಬಂಧಿಸಿದಂತೆ ಎನ್‌ಎಂಡಿಸಿ ಲಿಮಿಟೆಡ್ ಎಂಟು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.
ವರ್ಚುವಲ್ ವೇದಿಕೆಯ ಮೂಲಕ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು. ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸರ್ಕಾರಿ ಸ್ವಾಮ್ಯದ ಕಂಪನಿಗಳ ಕೊಡುಗೆ ಹಾಗೂ ಸಾಮಾಜಿಕ ಮತ್ತು ಆರ್ಥಿಕ ಮೌಲ್ಯ ಸೃಷ್ಟಿಸುವಲ್ಲಿ ಅವುಗಳ ಸಾಮರ್ಥ್ಯವನ್ನು ಪರಿಗಣಿಸಿ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
ನಾಯಕತ್ವದ ವಿಭಾಗದಲ್ಲಿ ಕಂಪನಿಯ ಸಿಎಂಡಿ ಸುಮಿತ್ ದೇಬ್ ಅವರು 2021ರ ಸಿಎಂಡಿ ಲೀಡರ್‌ಶಿಪ್ ಅವಾರ್ಡ್‌ಗೆ ಭಾಜನರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.