ನವದೆಹಲಿ: ‘ಭಾರತದ ಆಟೊಮೊಬೈಲ್ ಮಾರುಕಟ್ಟೆಯಲ್ಲಿ ಕಂಪನಿಯು ಗಟ್ಟಿಯಾಗಿ ಬೇರೂರಿದೆ. ಹಾಗಾಗಿ, ಇಲ್ಲಿಂದ ಹೊರಹೋಗುವ ಯಾವುದೇ ಉದ್ದೇಶ ಹೊಂದಿಲ್ಲ’ ಎಂದು ನಿಸ್ಸಾನ್ ಮೋಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸೌರಭ್ ವತ್ಸ ಹೇಳಿದ್ದಾರೆ.
ಮುಂದಿನ ಎರಡು ವರ್ಷದೊಳಗೆ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಹಾಲಿ ಇರುವ ಡೀಲರ್‌ಶಿಪ್‌ಗೆ ಈ ವರ್ಷದಲ್ಲಿ ಹೊಸದಾಗಿ 20 ಡೀಲರ್‌ಶಿಪ್‌ಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶೀಯ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ 1 ಲಕ್ಷಕ್ಕೂ ಹೆಚ್ಚು ವಾಹನಗಳ ಮಾರಾಟಕ್ಕೆ ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
‘ಆರು ದಶಕದಿಂದಲೂ ಭಾರತದ ಮಾರುಕಟ್ಟೆಯಲ್ಲಿ ನಿಸ್ಸಾನ್ ಕಾರ್ಯಾಚರಣೆ ನಡೆಸುತ್ತಿದೆ. ಹಾಗಾಗಿ, ಇಲ್ಲಿಂದ ಹೊರಗೋಗಲಿದೆ ಎಂಬುದು ಕೇವಲ ಊಹಾಪೋಹವಾಗಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.