
ನವದೆಹಲಿ: ‘ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ವಿದೇಶಿ ನೇರ ಹೂಡಿಕೆ ಪ್ರಮಾಣವನ್ನು (ಎಫ್‌ಡಿಐ) ಶೇ 49ಕ್ಕೆ ಹೆಚ್ಚಿಸುವ ಯಾವುದೇ ಪ್ರಸ್ತಾವವನ್ನು ಸರ್ಕಾರ ಪರಿಗಣಿಸುತ್ತಿಲ್ಲ’ ಎಂದು ಕೇಂದ್ರ ಹಣಕಾಸು ಇಲಾಖೆಯ ರಾಜ್ಯ ಸಚಿವ ಪಂಕಜ್ ಚೌಧರಿ ರಾಜ್ಯಸಭೆಗೆ ತಿಳಿಸಿದ್ದಾರೆ.
ಪ್ರಸ್ತುತ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಎಫ್‌ಡಿಐ ಮಿತಿ ಶೇ 20ರಷ್ಟು ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಶೇ 74ರಷ್ಟಿದೆ.
ಖಾಸಗಿ ಬ್ಯಾಂಕ್‌ಗಳಲ್ಲಿ ಶೇ 49ರವರೆಗೆ ವಿದೇಶಿ ನೇರ ಹೂಡಿಕೆಗೆ ಸರ್ಕಾರ ಅಥವಾ ಆರ್‌ಬಿಐನ ಪೂರ್ವಾನುಮೋದನೆ ಅಗತ್ಯವಿಲ್ಲ. ಆದರೆ, ಶೇ 49ಕ್ಕಿಂತ ಹೆಚ್ಚು ಹಾಗೂ ಶೇ 74ರವರೆಗೆ ವಿದೇಶಿ ನೇರ ಹೂಡಿಕೆಗೆ ಸರ್ಕಾರದ ಅನುಮತಿ ಅಗತ್ಯ.
2020ರಿಂದ ಸರ್ಕಾರಿ ಸ್ವಾಮ್ಯದ 12 ಬ್ಯಾಂಕ್‌ಗಳಲ್ಲಿ ಕೇಂದ್ರ ಸರ್ಕಾರದ ಷೇರುಗಳ ಸಂಖ್ಯೆ ಕಡಿಮೆ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದ್ದಾರೆ.
ಕೇಂದ್ರ ಸರ್ಕಾರ ಹೊಂದಿರುವ ಷೇರುಗಳ ಸಂಖ್ಯೆ ಕಡಿಮೆ ಆಗಿಲ್ಲವಾದರೂ, ಬ್ಯಾಂಕುಗಳು ಹೊಸ ಷೇರುಗಳನ್ನು ನೀಡುವ ಮೂಲಕ ಬಂಡವಾಳವನ್ನು ಸಂಗ್ರಹಿಸಿವೆ. ಹೀಗಾಗಿ, ಈ ಬ್ಯಾಂಕ್‌ಗಳ ಪೈಕಿ ಕೆಲವು ಬ್ಯಾಂಕುಗಳಲ್ಲಿ ಕೇಂದ್ರ ಸರ್ಕಾರದ ಷೇರುಗಳ ಶೇಕಡಾವಾರು ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.