ADVERTISEMENT

ಚಿಲ್ಲರೆ ಹಣದುಬ್ಬರದ ಅಂಕಿ–ಅಂಶ ಬಿಡುಗಡೆ ಇಲ್ಲ: ಕೇಂದ್ರ ಸರ್ಕಾರ

ಪಿಟಿಐ
Published 12 ಮೇ 2020, 19:45 IST
Last Updated 12 ಮೇ 2020, 19:45 IST
ದಿನಬಳಕೆ ವಸ್ತುಗಳ ಮಾರಾಟ ಮಳಿಗೆಯೊಂದರಲ್ಲಿ ಮಹಿಳೆಯೊಬ್ಬರು ಖರೀದಿಯಲ್ಲಿ ತೊಡಗಿರುವುದು/    ಚಿತ್ರ : ರಾಯಿಟರ್ಸ್‌
ದಿನಬಳಕೆ ವಸ್ತುಗಳ ಮಾರಾಟ ಮಳಿಗೆಯೊಂದರಲ್ಲಿ ಮಹಿಳೆಯೊಬ್ಬರು ಖರೀದಿಯಲ್ಲಿ ತೊಡಗಿರುವುದು/ ಚಿತ್ರ : ರಾಯಿಟರ್ಸ್‌    

ನವದೆಹಲಿ: ಲಾಕ್‌ಡೌನ್‌ ಇರುವುದರಿಂದ ಏಪ್ರಿಲ್‌ ತಿಂಗಳ ಚಿಲ್ಲರೆ ಹಣದುಬ್ಬರದ ಮಾಹಿತಿ ಸಂಗ್ರಹಿಸಲು ಸಾಧ್ಯವಾಗಿಲ್ಲ. ಹೀಗಾಗಿ ಅಂಕಿ–ಅಂಶಗಳನ್ನು ಬಿಡುಗಡೆ ಮಾಡುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ಅಧಿಕಾರಿಗಳು ಪ್ರತಿ ತಿಂಗಳೂ 1,114 ನಗರ ಮಾರುಕಟ್ಟೆಗಳು ಮತ್ತು 1,181 ಗ್ರಾಮೀಣ ಮಾರುಕಟ್ಟೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಾರೆ. ಆದರೆ ಲಾಕ್‌ಡೌನ್‌ನಿಂದ ಏಪ್ರಿಲ್‌ನಲ್ಲಿ ಅದು ಸಾಧ್ಯವಾಗಿಲ್ಲ. ಹೀಗಾಗಿ ದೂರವಾಣಿ ಮೂಲಕ ಸಂಗ್ರಹಿಸುವ ಅಂಕಿ–ಅಂಶಗಳನ್ನೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.ಆದರೆ, ಈ ರೀತಿ ಸಂಗ್ರಹಿಸುವ ಮಾಹಿತಿಯಲ್ಲಿ ಹಾಲಿನ ಉತ್ಪನ್ನಗಳು, ಹಣ್ಣು ಮತ್ತು ತರಕಾರಿಗಳ ಬೆಲೆಯಲ್ಲಿ ಆಗಿರುವ ಏರಿಕೆ ಒಳಗೊಂಡಿರುವುದಿಲ್ಲ ಎಂದೂ ಹೇಳಿದೆ. ಮಾರ್ಚ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 5.84ರಷ್ಟಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT