ADVERTISEMENT

99 ಡಾಲರ್‌ಗೆ ತಗ್ಗಿದ ತೈಲ ದರ

ಪಿಟಿಐ
Published 15 ಮಾರ್ಚ್ 2022, 16:27 IST
Last Updated 15 ಮಾರ್ಚ್ 2022, 16:27 IST
   

ನವದೆಹಲಿ (ಪಿಟಿಐ): ಎರಡು ವಾರಗಳ ಕಾಲ ಪ್ರತಿ ಬ್ಯಾರೆಲ್‌ಗೆ 100 ಡಾಲರ್‌ಗಿಂತ ಹೆಚ್ಚಿನ ಮಟ್ಟದಲ್ಲಿದ್ದ ಬ್ರೆಂಟ್ ಕಚ್ಚಾ ತೈಲ ಬೆಲೆಯು ಮಂಗಳವಾರ 99.84 ಡಾಲರ್‌ಗೆ ಇಳಿಕೆಯಾಗಿದೆ.

ಕಚ್ಚಾ ತೈಲದ ಬೆಲೆಯು ಫೆಬ್ರುವರಿ 28ರಂದು 100 ಡಾಲರ್ ದಾಟಿತ್ತು. ಮಂಗಳವಾರ ಇದರ ಬೆಲೆಯು ಶೇ 7ಕ್ಕಿಂತ ಹೆಚ್ಚು ಕುಸಿದಿದೆ. ಚೀನಾದಲ್ಲಿ ಕೋವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು, ಉಕ್ರೇನ್ ಮತ್ತು ರಷ್ಯಾ ನಡುವಿನ ಮಾತುಕತೆಯಲ್ಲಿ ಪ್ರಗತಿ ಕಂಡುಬಂದಿರುವುದು ಇದಕ್ಕೆ ಕಾರಣ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT