ADVERTISEMENT

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

ಪಿಟಿಐ
Published 18 ಜನವರಿ 2022, 17:33 IST
Last Updated 18 ಜನವರಿ 2022, 17:33 IST

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು 2014ರ ನಂತರದ ಗರಿಷ್ಠ ಮಟ್ಟ (ಬ್ಯಾರೆಲ್‌ಗೆ 87 ಡಾಲರ್) ತಲುಪಿದ್ದರೂ, ದೇಶಿ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 74 ದಿನಗಳಿಂದ ಸ್ಥಿರವಾಗಿ ಇದೆ.

ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಇರುವಂತೆ ನೋಡಿಕೊಳ್ಳಲಾಗಿದೆ ಎನ್ನಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಈ ಹಿಂದೆಯೂ ಮಹತ್ವದ ಚುನಾವಣೆಗಳ ಸಂದರ್ಭದಲ್ಲಿ ಸ್ಥಿರವಾಗಿ ಇರುವಂತೆ ನೋಡಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT