
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ತಯಾರಿಕಾ ಕಂಪನಿ ಓಲಾ ಎಲೆಕ್ಟ್ರಿಕ್, ಬ್ಯಾಟರಿ ಇಂಧನ ಸಂಗ್ರಹಣಾ ಮಾರುಕಟ್ಟೆಯನ್ನು ಪ್ರವೇಶಿಸಿದೆ.
ಈಗ ಈ ಮಾರುಕಟ್ಟೆಯ ಗಾತ್ರವು ₹1 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. ಇದು ಮುಂದಿನ ಐದು ವರ್ಷಗಳಲ್ಲಿ ₹3 ಲಕ್ಷ ಕೋಟಿಗೆ ಹೆಚ್ಚಾಗುವ ನಿರೀಕ್ಷೆ ಇದೆ.
ಓಲಾ ಎಲೆಕ್ಟ್ರಿಕ್ ಕಂಪನಿಯು ತಾನು ಆರಂಭಿಸಿರುವ ಬ್ಯಾಟರಿ ಇಂಧನ ಸಂಗ್ರಹಣಾ ವ್ಯವಸ್ಥೆಗೆ ‘ಓಲಾ ಶಕ್ತಿ’ ಎಂಬ ಹೆಸರಿತ್ತಿದೆ. ‘ಭಾರತದಲ್ಲಿ ಇಂಧನದ ಕೊರತೆ ಇಲ್ಲ. ಇಂಧನದ ಸಂಗ್ರಹಣಾ ವ್ಯವಸ್ಥೆಯು ಇಲ್ಲಿ ಸಮರ್ಪಕವಾಗಿ ಇಲ್ಲ. ಓಲಾ ಶಕ್ತಿ ಮೂಲಕ ನಾವು ಅವಕಾಶವನ್ನು ಇಂಧನ ಸ್ವಾತಂತ್ರ್ಯವನ್ನಾಗಿ ಪರಿವರ್ತಿಸುತ್ತಿದ್ದೇವೆ’ ಎಂದು ಓಲಾ ಎಲೆಕ್ಟ್ರಿಕ್ ಅಧ್ಯಕ್ಷ ಹಾಗೂ ಎಂ.ಡಿ. ಭವೀಶ್ ಅಗರ್ವಾಲ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.