
ಪಿಟಿಐ
ನವದೆಹಲಿ: ಉತ್ಪಾದನೆ ಆಧಾರಿತ ಉತ್ತೇಜನ (ಪಿಎಲ್‌ಐ) ಯೋಜನೆಯ ಅಡಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯವು ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಕಂಪನಿ ಓಲಾ ಎಲೆಕ್ಟ್ರಿಕ್‌ಗೆ ₹366.78 ಕೋಟಿ ಮಂಜೂರು ಮಾಡಿದೆ.
2024–25ರ ಆರ್ಥಿಕ ವರ್ಷದಲ್ಲಿ ಮಾರಾಟವಾದ ವಾಹನಗಳ ಮೌಲ್ಯವನ್ನು ನಿರ್ಧರಿಸಿ ಈ ಉತ್ತೇಜನ ನೀಡಲಾಗಿದೆ ಎಂದು ಓಲಾ ಎಲೆಕ್ಟ್ರಿಕ್ ಗುರುವಾರ ತಿಳಿಸಿದೆ.
ಪಿಎಲ್‌ಐ ಆಟೊ ಯೋಜನೆಯು ಕೇಂದ್ರ ಸರ್ಕಾರದ್ದು. ಇದು ದೇಶದಲ್ಲಿ ವಾಹನಗಳನ್ನು ತಯಾರಿಸುವ ಕಂಪನಿಗಳನ್ನು ಸದೃಢಗೊಳಿಸುವ ಗುರಿ ಹೊಂದಿದೆ. ಅಲ್ಲದೆ, ಸುಧಾರಿತ ವಾಹನೋದ್ಯಮ ತಂತ್ರಜ್ಞಾನಗಳನ್ನು ಪ್ರೋತ್ಸಾಹಿಸುವುದು, ವಾಹನ ಮತ್ತು ವಾಹನದ ಬಿಡಿಭಾಗಗಳ ತಯಾರಿಕೆಯಲ್ಲಿ ಭಾರತದ ಜಾಗತಿಕ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.