
ಪಿಟಿಐ
ನವದೆಹಲಿ: ಓಲಾ ಕಂಪನಿಯ ಸಿಇಒ ಹೇಮಂತ್ ಬಕ್ಷಿ ಅವರು, ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಕ್ಷಿ ಅವರು ನಾಲ್ಕು ತಿಂಗಳ ಹಿಂದೆ ಕಂಪನಿಗೆ ಸೇರ್ಪಡೆಯಾಗಿದ್ದರು. ಎಎನ್‌ಐ ಟೆಕ್ನಾಲಜೀಸ್ ಒಡೆತನದ ಓಲಾ ವಿಭಾಗದಲ್ಲಿ ಅಂದಾಜು 900 ಸಿಬ್ಬಂದಿ ಇದ್ದಾರೆ. ಈ ಪೈಕಿ ಶೇ 10–15ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಕಂಪನಿ ನಿರ್ಧರಿಸಿದೆ. 90–140 ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಕಂಪನಿಯು ಪ್ರತಿಕ್ರಿಯಿಸಲು ನಿರಾಕರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.