ADVERTISEMENT

ಕಚ್ಚಾ ತೈಲ ಉತ್ಪಾದನೆ ಹೆಚ್ಚಳಕ್ಕೆ ಒಪೆಕ್‌ ಒಕ್ಕೂಟ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 15:42 IST
Last Updated 5 ಅಕ್ಟೋಬರ್ 2025, 15:42 IST
ಕಚ್ಚಾ ತೈಲ
ಕಚ್ಚಾ ತೈಲ   

ವಿಯೆನ್ನಾ: ಕಚ್ಚಾ ತೈಲ ಉತ್ಪಾದನೆಯನ್ನು ಪ್ರತಿನಿತ್ಯ 1.37 ಲಕ್ಷ ಬ್ಯಾರೆಲ್‌ನಷ್ಟು ಹೆಚ್ಚಿಸಲು ಒಪೆಕ್‌ ಒಕ್ಕೂಟದ ಎಂಟು ರಾಷ್ಟ್ರಗಳು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿವೆ. ನವೆಂಬರ್‌ನಲ್ಲಿ ಈ ಹೆಚ್ಚಳ ಆಗಲಿದೆ.

ಒಪೆಕ್‌+ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಸೌದಿ ಅರೇಬಿಯಾ, ರಷ್ಯಾ ಸೇರಿ ಆರು ರಾಷ್ಟ್ರಗಳು ಉತ್ಪಾದನೆ ಹೆಚ್ಚು ಮಾಡಲು ತೀರ್ಮಾನಿಸಿವೆ. ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ಹೆಚ್ಚಿಸಿಕೊಳ್ಳುವ ಗುರಿಯೊಂದಿಗೆ ಉತ್ಪಾದನೆ ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT