ಲಂಡನ್/ವಿಯೆನ್ನಾ: ಕಚ್ಚಾ ತೈಲ ಉತ್ಪಾದನೆಯನ್ನು ಪ್ರತಿನಿತ್ಯ 5.47 ಲಕ್ಷ ಬ್ಯಾರೆಲ್‌ನಷ್ಟು ಹೆಚ್ಚಿಸಲು ಒಪೆಕ್+ ಒಕ್ಕೂಟದ ಎಂಟು ರಾಷ್ಟ್ರಗಳು ಭಾನುವಾರ ನಡೆದ ಸಭೆಯಲ್ಲಿ ನಿರ್ಧರಿಸಿವೆ. ಸೆಪ್ಟೆಂಬರ್‌ನಲ್ಲಿ ಈ ಹೆಚ್ಚಳ ಆಗಲಿದೆ.
ಒಪೆಕ್+ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಸೌದಿ ಅರೇಬಿಯಾ, ರಷ್ಯಾ, ಇರಾಕ್, ಯುಎಇ, ಕುವೈತ್, ಕಜಕಸ್ತಾನ್, ಅಲ್ಜೀರಿಯಾ ಮತ್ತು ಒಮಾನ್ ಉತ್ಪಾದನೆ ಹೆಚ್ಚು ಮಾಡಲು ತೀರ್ಮಾನಿಸಿವೆ. ಈ ರಾಷ್ಟ್ರಗಳು ಈಗ ಪ್ರತಿದಿನ 4.1 ಕೋಟಿಯಿಂದ 4.2 ಕೋಟಿ ಬ್ಯಾರೆಲ್‌ನಷ್ಟು ಕಚ್ಚಾತೈಲ ಉತ್ಪಾದನೆ ಮಾಡುತ್ತಿವೆ. ಉತ್ಪಾದನೆಯನ್ನು ಶೇ 1.5ರಷ್ಟು ಹೆಚ್ಚಳ ಮಾಡುವುದಾಗಿ ತಿಳಿಸಿವೆ.
ಈ ರಾಷ್ಟ್ರಗಳು ಜಗತ್ತಿನ ಒಟ್ಟು ತೈಲ ಉತ್ಪಾದನೆಯಲ್ಲಿ ಶೇ 50ರಷ್ಟು ಪಾಲು ಹೊಂದಿವೆ. ಮಾರುಕಟ್ಟೆಯಲ್ಲಿ ತಮ್ಮ ಪಾಲನ್ನು ಹೆಚ್ಚಿಸಿಕೊಳ್ಳುವ ಗುರಿಯೊಂದಿಗೆ ಈ ರಾಷ್ಟ್ರಗಳು ಉತ್ಪಾದನೆ ಹೆಚ್ಚಿಸುವ ತೀರ್ಮಾನ ತೆಗೆದುಕೊಂಡಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.
ಬ್ರೆಂಟ್ ಕಚ್ಚಾ ತೈಲದ ಬೆಲೆಯು ಈಗ ಬ್ಯಾರೆಲ್‌ಗೆ 70 ಡಾಲರ್‌ನಷ್ಟು ಇದೆ. ಉತ್ಪಾದನೆ ಹೆಚ್ಚಳವು ದರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.