ADVERTISEMENT

ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ₹10 ಲಕ್ಷ ಕೋಟಿ ಸಾಲ ವಿತರಣೆ: ಸಚಿವಾಲಯ

ಪಿಟಿಐ
Published 26 ಫೆಬ್ರುವರಿ 2025, 13:25 IST
Last Updated 26 ಫೆಬ್ರುವರಿ 2025, 13:25 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕಳೆದ ವರ್ಷದ ಡಿಸೆಂಬರ್‌ ಅಂತ್ಯದವರೆಗೆ ಬಳಕೆಯಲ್ಲಿರುವ ಕಿಸಾನ್ ಕ್ರೆಡಿಟ್‌ ಕಾರ್ಡ್‌ಗಳ (ಕೆಸಿಸಿ) ಮೂಲಕ 7.72 ಕೋಟಿ ರೈತರಿಗೆ ₹10 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

2014ರ ಮಾರ್ಚ್‌ವರೆಗೆ ₹4.26 ಲಕ್ಷ ಕೋಟಿ ಕೆಸಿಸಿ ಸಾಲ ನೀಡಲಾಗಿತ್ತು. 

ಇದರಡಿ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಚಟುವಟಿಕೆಗಳಿಗೆ ರೈತರಿಗೆ ಕೈಗಟುಕುವ ಬಡ್ಡಿದರದಲ್ಲಿ ಸಾಲ ಸಿಗಲಿದೆ. ಈ ಅಂಕಿಅಂಶವು ಹಣಕಾಸುಯೇತರ ಸಂಸ್ಥೆಗಳ ಸಾಲದ ಮೇಲಿನ ಅವಲಂಬನೆಯು ಇಳಿಕೆಯಾಗಿರುವುದಕ್ಕೆ ಕನ್ನಡಿ ಹಿಡಿದಿದೆ ಎಂದು ಹೇಳಿದೆ.

ADVERTISEMENT

ಸದ್ಯ ಶೇ 7ರ ಬಡ್ಡಿದರದಲ್ಲಿ ₹3 ಲಕ್ಷದವರೆಗೆ ಕೆಸಿಸಿ ಸಾಲ ನೀಡಲಾಗುತ್ತದೆ. ರೈತರು ಬಿತ್ತನೆಬೀಜ, ರಸಗೊಬ್ಬರ, ಕೀಟನಾಶಕ ಖರೀದಿಸಲು ನೆರವಾಗಲಿದೆ. ಸಕಾಲದಲ್ಲಿ ಮರುಪಾವತಿಸಿದರೆ ಶೇ 3ರಷ್ಟು ಬಡ್ಡಿ ಸಬ್ಸಿಡಿ ದೊರೆಯಲಿದೆ.

ಕೇಂದ್ರ ಸರ್ಕಾರವು ರೈತರಿಗೆ ಮತ್ತಷ್ಟು ಅನುಕೂಲ ಕಲ್ಪಿಸಲು 2025–26ನೇ ಸಾಲಿನ ಬಜೆಟ್‌ನಲ್ಲಿ ಈ ಸಾಲದ ಮಿತಿಯನ್ನು ₹3 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.